Advertisement
MIRROR FOCUS

ನೀರಿನ ಅಭಾವಕ್ಕೆ ಸಾಸಿವೆ ಪರಿಹಾರ : ಕಂಪ್ಲಿ ರೈತರ ಪರ್ಯಾಯ ಕೃಷಿ ಯಶೋಗಾಥೆ

Share

ಕೃಷಿ ಚಟುವಟಿಕೆ ಬಹುತೇಕವಾಗಿ ನೀರಿನ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ನೀರಿನ ಅಭಾವದಂತಹ ಸಂಕಷ್ಟದ ಸಂದರ್ಭಗಳಲ್ಲಿ ಪರ್ಯಾಯ ಮಾರ್ಗಗಳನ್ನು ಹುಡುಕುವುದು ರೈತರಿಗೆ ಅವಶ್ಯಕವಾಗುತ್ತದೆ. ಇದೇ ದಿಸೆಯಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರೈತರು ಹೊಸ ಪ್ರಯೋಗಕ್ಕೆ ಮುಂದಾಗಿ ಸಾಸಿವೆ ಕೃಷಿಯತ್ತ ಮುಖ ಮಾಡಿದ್ದಾರೆ.

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ಗಳ ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಎರಡನೇ ಬೆಳೆಗೆ ಅಗತ್ಯ ನೀರು ಲಭ್ಯವಾಗದೇ ರೈತರು ಸಂಕಷ್ಟ ಎದುರಿಸಿದ್ದಾರೆ. ಸಾಮಾನ್ಯವಾಗಿ ಸದಾ ಹಸಿರಿನಿಂದ ಕಂಗೊಳಿಸುವ ಭತ್ತದ ಗದ್ದೆಗಳು ಈ ಬಾರಿ ಪರ್ಯಾಯ ಬೆಳೆಯಾದ ಸಾಸಿವೆ ಹೂಗಳಿಂದ ಹಳದಿ ಬಣ್ಣದಲ್ಲಿ ಮಿಂಚುತ್ತಿವೆ.

ನೀರಿನ ಕೊರತೆಯ ನಡುವೆಯೂ ಕಡಿಮೆ ಪ್ರಮಾಣದ ನೀರಿನಲ್ಲಿ ಬೆಳೆಯಬಹುದಾದ ಸಾಸಿವೆ ರೈತರಿಗೆ ಆಶಾಕಿರಣವಾಗಿದೆ. ಎಕರೆವೊಂದಕ್ಕೆ ಸುಮಾರು ₹5 ಸಾವಿರ ವೆಚ್ಚದಲ್ಲಿ ಬೆಳೆ ಬೆಳೆಸಬಹುದಾಗಿದ್ದು, ₹15 ಸಾವಿರವರೆಗೆ ಲಾಭ ಗಳಿಸುವ ಸಾಧ್ಯತೆ ಇದೆ ಎಂದು ರೈತರು ಹೇಳುತ್ತಾರೆ. ಸ್ಥಳೀಯ ಮಾರುಕಟ್ಟೆಯಲ್ಲೂ ಸಾಸಿವೆ ಬೆಳೆಗೆ ಉತ್ತಮ ಬೇಡಿಕೆ ಇರುವುದರಿಂದ ರೈತರಿಗೆ ಆರ್ಥಿಕ ಭದ್ರತೆ ಒದಗಿಸುತ್ತಿದೆ. ಜೊತೆಗೆ ಸಾಸಿವೆ ಗಿಡಗಳು ಜಾನುವಾರುಗಳಿಗೆ ಉತ್ತಮ ಮೇವು ಕೂಡ ಆಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತರ ಮಾತು

“ಈ ವರ್ಷ ಎರಡನೇ ಬೆಳೆಗೆ ನೀರಿನ ಸಮಸ್ಯೆ ಎದುರಾದ ಕಾರಣ ಪರ್ಯಾಯವಾಗಿ ಸಾಸಿವೆ ಕೃಷಿ ಕೈಗೊಂಡಿದ್ದೇವೆ. ಕಡಿಮೆ ಗೊಬ್ಬರ ಹಾಗೂ ಮಿತ ಪ್ರಮಾಣದ ಕೀಟನಾಶಕ ಸಾಕಾಗುತ್ತದೆ.” — ರೈತ ಚಂದ್ರಶೇಖರ ರೆಡ್ಡಿ

“ವರ್ಷದಲ್ಲಿ ಎರಡು ಬಾರಿ ಭತ್ತ ಬೆಳೆದರೆ ಮಣ್ಣಿನ ಫಲವತ್ತತೆ ಕುಸಿಯುತ್ತದೆ. ಸಾಸಿವೆಂತಹ ಪರ್ಯಾಯ ಬೆಳೆಗಳು ಮಣ್ಣಿನ ಆರೋಗ್ಯ ಕಾಪಾಡಲು ನೆರವಾಗುತ್ತವೆ.” — ರೈತ ರವಿಚಂದ್ರ

ಕೃಷಿ ಇಲಾಖೆ ಅಭಿಪ್ರಾಯ

“ಈ ಬಾರಿ ಕಂಪ್ಲಿ ತಾಲೂಕಿನಲ್ಲಿ ಸುಮಾರು 250 ರಿಂದ 350 ಹೆಕ್ಟೇರ್ ಪ್ರದೇಶದಲ್ಲಿ ಸಾಸಿವೆ ಬೆಳೆಯಲಾಗುತ್ತಿದೆ. ಮಳೆಯ ಕೊರತೆ ಹಾಗೂ ನೀರಿನ ಅಭಾವದ ಪರಿಸ್ಥಿತಿಯಲ್ಲಿಯೂ ಸಾಸಿವೆ ಉತ್ತಮ ಆದಾಯ ನೀಡಬಲ್ಲ ಬೆಳೆ.” — ಜ್ಯೋತಿ, ಪ್ರಭಾರಿ ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ

“ಸಾಸಿವೆ ಕೃಷಿಯಲ್ಲಿ ಕಡಿಮೆ ಖರ್ಚು ಮಾಡಿ ಹೆಚ್ಚಿನ ಆದಾಯ ಗಳಿಸಬಹುದು. ಎಣ್ಣೆ ಕಾಳುಗಳಿಗೆ ಹೆಚ್ಚುತ್ತಿರುವ ಬೇಡಿಕೆ ರೈತರಿಗೆ ಲಾಭದಾಯಕವಾಗಿದೆ.”
— ವಿದ್ಯಾವತಿ ಹೊಸಮನಿ, ಸಹಾಯಕ ಕೃಷಿ ನಿರ್ದೇಶಕಿ

ವಿಜ್ಞಾನಿಗಳ ಸಲಹೆ

“ಭತ್ತ ಕಟಾವು ಮಾಡುವ ಸುಮಾರು 10 ದಿನಗಳ ಮುಂಚಿತವಾಗಿ ಸಾಸಿವೆ ಬೀಜ ಬಿತ್ತನೆ ಮಾಡಿದರೆ ಭತ್ತದ ತೇವಾಂಶವೇ ಮೊಳಕೆಗೆ ಅನುಕೂಲಕರ ವಾತಾವರಣ ಒದಗಿಸುತ್ತದೆ.” — ಡಾ. ಮಲ್ಲೇಶ್, ವಿಜ್ಞಾನಿ, ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿ

ಒಟ್ಟಿನಲ್ಲಿ ಕೃಷಿ ವಲಯದಲ್ಲಿ ಎದುರಾಗುವ ಸಂಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ, ವಿನೂತನ ಪ್ರಯತ್ನಗಳ ಮೂಲಕ ಪರ್ಯಾಯ ಬೆಳೆಗಳನ್ನು ಅಳವಡಿಸಿಕೊಳ್ಳುತ್ತಿರುವ ಅನ್ನದಾತರ ಈ ಪ್ರಯತ್ನ ಇತರ ರೈತರಿಗೆ ಸ್ಪೂರ್ತಿದಾಯಕವಾಗಿದೆ.

Due to water shortage caused by repair works at the Tungabhadra reservoir, farmers in Kampli taluk of Ballari district have shifted to mustard cultivation as an alternative second crop. Requiring less water and lower investment, mustard farming is helping farmers sustain income while improving soil health, making it a viable climate-resilient agricultural practice.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…

6 hours ago

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…

12 hours ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

22 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

1 day ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

1 day ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago