Advertisement
ಸುದ್ದಿಗಳು

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

Share

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸಿ ದೇಶದ ವಿವಿಧ ರಾಜ್ಯಗಳಿಗೆ ಪೂರೈಸುತ್ತಿದ್ದ ಮೂರು ಹಂತದ (Three-tier) ಕಳ್ಳಸಾಗಣೆ ಜಾಲವನ್ನು ಜಾರಿ ನಿರ್ದೇಶನಾಲಯ (ED) ತನಿಖೆಯಲ್ಲಿ ಪತ್ತೆಹಚ್ಚಿರುವುದಾಗಿ ವರದಿಯಾಗಿದೆ. ಈ ಜಾಲವು ಮ್ಯಾನ್ಮಾರ್, ಮಿಜೋರಾಂ, ಅಸ್ಸಾಂ ಹಾಗೂ ದೇಶದ ವಿವಿಧ ರಾಜ್ಯಗಳಿಗೆ ವ್ಯಾಪಿಸಿರುವ ಸಂಘಟಿತ ಜಾಲವಾಗಿದ್ದು, ನಕಲಿ ದಾಖಲೆಗಳು, ಬ್ಯಾಂಕ್ ವ್ಯವಹಾರಗಳು ಮತ್ತು ಶೆಲ್ ಕಂಪನಿಗಳ ಮೂಲಕ ಅಕ್ರಮ ವ್ಯಾಪಾರ ನಡೆಸಲಾಗುತ್ತಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ ಎಂದು “ಹಬ್ ನ್ಯೂಸ್”ನೆಟ್‌ವರ್ಕ್‌ ತಿಳಿಸಿದೆ.‌

“ಹಬ್‌ ನ್ಯೂಸ್‌” ವರದಿಯಂತೆ,  ಜಾರಿ ನಿರ್ದೇಶನಾಲಯದ ಪ್ರಕಾರ, ಈ ಜಾಲದ ವಿರುದ್ಧ ಅಸ್ಸಾಂ ಮತ್ತು ದೆಹಲಿಯಲ್ಲಿನ ಹಲವು ನಿವಾಸ ಹಾಗೂ ವ್ಯಾಪಾರ ಕೇಂದ್ರಗಳ ಮೇಲೆ ಶೋಧ ನಡೆಸಲಾಗಿದೆ. ತನಿಖೆಯು ಗುವಾಹಟಿ ಹೈಕೋರ್ಟ್ ನಿರ್ದೇಶನದ ಮೇರೆಗೆ ಸಿಬಿಐ ದಾಖಲಿಸಿದ್ದ ಪ್ರಕರಣದಿಂದ ಆರಂಭವಾಗಿದ್ದು, ಮ್ಯಾನ್ಮಾರ್ ಮೂಲದ ಅಡಿಕೆಯನ್ನು ನಕಲಿ ದಾಖಲೆಗಳ ಮೂಲಕ ಭಾರತಕ್ಕೆ ಸಾಗಿಸಲಾಗುತ್ತಿತ್ತು ಎಂಬ ಆರೋಪಗಳ ತನಿಖೆ ಮುಂದುವರಿದಿದೆ.

ಮೂರು ಹಂತದಲ್ಲಿ ನಡೆದಿತ್ತು ಕಳ್ಳಸಾಗಣೆ

ಮೊದಲ ಹಂತ: ಮ್ಯಾನ್ಮಾರ್‌ನಿಂದ ಮಿಜೋರಾಂನ ಜೋಖಾವ್ತಾರ್ ಗಡಿ ಮೂಲಕ ಕಸ್ಟಮ್ಸ್ ಅನುಮತಿಯಿಲ್ಲದೆ ಅಡಿಕೆಯನ್ನು ಭಾರತಕ್ಕೆ ತರಲಾಗುತ್ತಿತ್ತು. ನಂತರ ಚಾಂಫೈ ಜಿಲ್ಲೆಯ ಗೋದಾಮುಗಳಲ್ಲಿ ಸಂಗ್ರಹಿಸಲಾಗುತ್ತಿತ್ತು.

ಎರಡನೇ ಹಂತ: ಚಾಂಫೈಯಿಂದ ಅಸ್ಸಾಂನ ಕಚಾರ್, ಹೈಲಕಂಡಿ ಹಾಗೂ ಶ್ರೀಭೂಮಿ ಜಿಲ್ಲೆಗಳ ವ್ಯಾಪಾರಿಗಳು ಮತ್ತು ಹಣಕಾಸುದಾರರಿಗೆ ಅಡಿಕೆಯನ್ನು ಸಾಗಿಸಲಾಗುತ್ತಿತ್ತು. ಬ್ಯಾಂಕ್ ವ್ಯವಹಾರಗಳ ಮೂಲಕ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆಯಾಗಿದೆ ಎಂದು ಇಡಿ ಹೇಳಿದೆ.

ಮೂರನೇ ಹಂತ: ಅಸ್ಸಾಂನಿಂದ ಈ ಅಡಿಕೆಯನ್ನು ದೆಹಲಿ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ನಾಗ್ಪುರ ಸೇರಿದಂತೆ ದೇಶದ ವಿವಿಧ ಮಾರುಕಟ್ಟೆಗಳಿಗೆ ಕಳುಹಿಸಲಾಗುತ್ತಿತ್ತು. ನಕಲಿ ಇ-ವೇ ಬಿಲ್‌, ಜಿಎಸ್‌ಟಿ ದಾಖಲೆಗಳು ಹಾಗೂ ಶೆಲ್ ಕಂಪನಿಗಳ ಮೂಲಕ ಅಕ್ರಮ ಸರಕನ್ನು ಕಾನೂನುಬದ್ಧವೆಂದು ತೋರಿಸಲಾಗುತ್ತಿತ್ತು ಎನ್ನಲಾಗಿದೆ.

ಇಡಿ ತನಿಖೆಯಲ್ಲಿ ಸಹಿ ಮಾಡಿರುವ ಖಾಲಿ ಚೆಕ್‌ಗಳು, ಆಸ್ತಿ ದಾಖಲೆಗಳು, ಮೊಬೈಲ್‌ಗಳು, ಡಿಜಿಟಲ್ ಸಾಧನಗಳು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಜಾಲದ ಮೂಲಕ ₹1,500 ಕೋಟಿಗೂ ಅಧಿಕ ಅಕ್ರಮ ಹಣದ ವಹಿವಾಟು ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಇನ್ನಷ್ಟು ಫಲಾನುಭವಿಗಳನ್ನು ಪತ್ತೆಹಚ್ಚುವ ತನಿಖೆ ಮುಂದುವರಿದಿದೆ.

ಈ ಬೆಳವಣಿಗೆ ದೇಶೀಯ ಅಡಿಕೆ ಬೆಳೆಗಾರರ ದೃಷ್ಟಿಯಿಂದ ಮಹತ್ವದ್ದಾಗಿದೆ. ಹಲವು ವರ್ಷಗಳಿಂದ ವಿದೇಶಿ ಅಕ್ರಮ ಅಡಿಕೆ ಆಮದು ದೇಶೀಯ ಮಾರುಕಟ್ಟೆಯ ಬೆಲೆ ಮತ್ತು ರೈತರ ಆದಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಅಡಿಕೆ ಬೆಳೆಗಾರರು ಹಾಗೂ ಅಡಿಕೆ ಬೆಳೆಗಾರರ ಸಂಘಟನೆಗಳು ಆಗ್ರಹಿಸುತ್ತಿವೆ. ತನಿಖೆ ಇನ್ನೂ ಮುಂದುವರಿಯುತ್ತಿದ್ದು, ಆರೋಪಗಳ ಕುರಿತು ಅಂತಿಮ ನಿರ್ಧಾರ ನ್ಯಾಯಾಂಗ ಪ್ರಕ್ರಿಯೆಯ ಬಳಿಕವೇ ಸ್ಪಷ್ಟವಾಗಲಿದೆ ಎಂದು ವರದಿಯಾಗಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The Enforcement Directorate (ED) has uncovered an alleged three-tier Myanmar-origin areca nut smuggling syndicate operating through Mizoram, Assam and several Indian states. Investigators allege the network used forged GST documents, fake e-way bills and shell entities to distribute smuggled areca nuts across India, with suspected money laundering exceeding ₹1,500 crore.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

7 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

7 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

18 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

24 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

24 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

24 hours ago