ಜನವರಿ 2 ರ ವರೆಗೆ ಮೈಸೂರು ಅರಮನೆ ಆವರಣದಲ್ಲಿ ಕ್ರಿಸ್ಮಸ್ ಹಾಗೂ ಹೊಸವರ್ಷದ ಆಚರಣೆಯ ಹಿನ್ನಲೆಯಲ್ಲಿ ಫಲಪುಷ್ಟ ಪ್ರದರ್ಶನ ಏರ್ಪಾಡು ಮಾಡಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಫಲಪುಷ್ಟ ಪ್ರದರ್ಶನಕ್ಕೆ ಚಾಲನೆಯನ್ನು ನೀಡಲಿದ್ದಾರೆ.
ಈ ವರ್ಷ ತಮಿಳುನಾಡಿನಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಭಾರತೀಯ 3 ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ನಟ ಪುನೀತ್ ರಾಜ್ ಕುಮಾರ್ ಅವರಿಗೆ ವಿಶೇಷವಾಗಿ ಪುಷ್ಪ ನಮನವನ್ನು ಫಲಪುಷ್ಪ ಪ್ರದರ್ಶನದಲ್ಲಿ ಮಾಡಲಾಗಿದೆ. ಈ ವರ್ಷ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಅವರ ಪುಷ್ಪ ಮೂರ್ತಿಯನ್ನು ಸಿದ್ಧ ಮಾಡಲಾಗಿದೆ. ಮತ್ತು ಅಯೋಧ್ಯೆ ಶ್ರೀ ರಾಮ ಮಂದಿರ, ಚಾಮುಂಡೇಶ್ವರಿ ದೇವತೆ, ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಮಾದರಿಯ ಪ್ರತಿಮೆಗಳು ಮೈಸೂರು ಅರಮನೆ ಅವರಣದಲ್ಲಿ ಸಿದ್ಧವಾಗಿದೆ.
ಕೋವಿಡ್ ಹಿನ್ನಲೆಯಿಂದ ಸಾಕಷ್ಟು ಮುಂಜಾಗ್ರತೆಯನ್ನು ತೆಗೆದುಕೊಳ್ಳಲಾಗಿದ್ದು ಫಲಪುಷ್ಪ ಪ್ರದರ್ಶನವನ್ನು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8.30 ರವರೆಗೆ ವೀಕ್ಷಿಸಬಹುದಾಗಿದೆ. ಮಾತ್ರವಲ್ಲದೆ ಪ್ರತಿ ದಿನ 5೦೦ ಮಂದಿಗೆ ಮಾತ್ರ ಪ್ರವೇಶವನ್ನು ನೀಡಲಾಗುತ್ತದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕರು ತಿಳಿಸಿದರೆ.