ಸೆ.26 ರಂದು ಮೈಸೂರು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರು ದಸರಾ ಉದ್ಫಾಟನಾ ಕಾರ್ಯಕ್ರಮಕ್ಕೆ ಉದ್ಘಾಟಿಸುವರು. ಈ ಹಿನ್ನೆಲೆಯಲ್ಲಿ ಬೆಳಗ್ಗೆ 11.30 ಗಂಟೆ ಕೆಲವು ಗಂಟೆಗಳವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನ ನಿರ್ಬಂಧವಿದ್ದು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel