ಮೈಸೂರು ದಸರಾ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು |

September 26, 2022
12:53 PM

 ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ವಿಶ್ವ ವಿಖ್ಯಾತವಾದ ನಾಡಹಬ್ಬ ಮೈಸೂರು ದಸರಾ(Mysore Dasara) ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು. ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.

Advertisement
Advertisement

ದಸರಾ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಮೈಸೂರು ದಸರಾ ಭಾರತದ ಸಂಸ್ಕೃತಿಯ ಪ್ರತೀಕವಾಗಿದೆ. ದಸರಾ ಹಬ್ಬವು ಹಲವು ಸಂಸ್ಕೃತಿಯ ಜೊತೆಗೆ ಬೆಸದುಕೊಂಡಿದೆ. ಬಸವಣ್ಣ, ಅಲ್ಲಮಪ್ರಭು ಆದರ್ಶ ವ್ಯಕ್ತಿಗಳಾಗಿದ್ದು. ಬಸವಣ್ಣನವರ ವಚನಗಳು ಜನತಂತ್ರಕ್ಕೆ ಮಾದರಿಯಾಗಿವೆ. ಈಗಲೂ ಬಸವಣ್ಣನವರ ವಚನಗಳನ್ನು ಭಕ್ತಿಪೂರ್ವಕವಾಗಿ ಕೇಳಲಾಗುತ್ತದೆ ಎಂದರು.

Advertisement

ಬೆಳಿಗ್ಗೆ 9.45ರಿಂದ 10.05ರ ವೃಶ್ಚಿಕ ಲಗ್ನದಲ್ಲಿ ಆರಂಭವಾದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ಲಭಿಸಿತು.

Advertisement

ವೇದಿಕೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರದ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ , ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೊದಲಾದವರಿದ್ದರು.

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಳಲಂಬೆಯಲ್ಲಿ ಯಕ್ಷಗಾನ | ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ ಗೌರವಾರ್ಪಣೆ | ಕಲಾವಿದರನ್ನು ಗೌರವಿಸುವುದು ಉತ್ತಮ ಕೆಲಸ -ಹರೀಶ್ ಬಳಂತಿಮೊಗರು |
May 14, 2024
10:05 PM
by: ದ ರೂರಲ್ ಮಿರರ್.ಕಾಂ
ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |
May 14, 2024
9:32 PM
by: ದ ರೂರಲ್ ಮಿರರ್.ಕಾಂ
ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |
May 14, 2024
8:28 PM
by: ದ ರೂರಲ್ ಮಿರರ್.ಕಾಂ
ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?
May 14, 2024
12:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror