ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತವಾದ ನಾಡಹಬ್ಬ ಮೈಸೂರು ದಸರಾ(Mysore Dasara) ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು. ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.
ದಸರಾ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಮೈಸೂರು ದಸರಾ ಭಾರತದ ಸಂಸ್ಕೃತಿಯ ಪ್ರತೀಕವಾಗಿದೆ. ದಸರಾ ಹಬ್ಬವು ಹಲವು ಸಂಸ್ಕೃತಿಯ ಜೊತೆಗೆ ಬೆಸದುಕೊಂಡಿದೆ. ಬಸವಣ್ಣ, ಅಲ್ಲಮಪ್ರಭು ಆದರ್ಶ ವ್ಯಕ್ತಿಗಳಾಗಿದ್ದು. ಬಸವಣ್ಣನವರ ವಚನಗಳು ಜನತಂತ್ರಕ್ಕೆ ಮಾದರಿಯಾಗಿವೆ. ಈಗಲೂ ಬಸವಣ್ಣನವರ ವಚನಗಳನ್ನು ಭಕ್ತಿಪೂರ್ವಕವಾಗಿ ಕೇಳಲಾಗುತ್ತದೆ ಎಂದರು.
ಬೆಳಿಗ್ಗೆ 9.45ರಿಂದ 10.05ರ ವೃಶ್ಚಿಕ ಲಗ್ನದಲ್ಲಿ ಆರಂಭವಾದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ಲಭಿಸಿತು.
ವೇದಿಕೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರದ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ , ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೊದಲಾದವರಿದ್ದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ…
1985 ರಲ್ಲಿ ಅಡಿಕೆ ಮಾರುಕಟ್ಟೆಗೆ ಕೊಠಾರಿ ಸಮೂಹ ಪ್ರವೇಶ ಮಾಡಿತು. ಅಲ್ಲಿಂದ ಅಡಿಕೆ…
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500…
ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843…
ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.…