ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, “ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ. ಈ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಆತ್ಮಶಕ್ತಿ ತುಂಬುವ ಕಾರ್ಯ ಮಾಡೋಣ” ಎಂದು ಕರೆ ನೀಡಿದರು.
Advertisement
ತಾಯಿ ಚಾಮುಂಡೇಶ್ವರಿಗೆ ಮಂಗಳಾರತಿ ಮಾಡಿ, ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ದಸರಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕರ್ನಾಟಕವು ಮಹಿಳಾ ಸಮಾನತೆಗೂ ಹೆಸರುವಾಸಿ. ಇಲ್ಲಿ ದೇವಿಯ ಆರಾಧನೆಗೂ ಹೆಚ್ಚಿನ ಮಹತ್ವ ಇದೆ. ದೇವಿಯು ಶಕ್ತಿಸ್ವರೂಪಳೂ ಹೌದು, ತಾಯಿಯಾಗಿ ಭಕ್ತರನ್ನು ಕಾಪಾಡುವ ತಾಯಿ ಸ್ವರೂಪಳೂ ಹೌದು. ಹೀಗಾಗಿ ದಸರಾ ಸಮಯದಲ್ಲಿ ಮಹಿಳಾ ಶಕ್ತಿಯ ಉದ್ದೀಪನವಾಗಲಿ. ಮಹಿಳೆಯರು ಹಲವು ಆಯಾಮಗಳಲ್ಲಿ ಈಗ ಪ್ರಗತಿ ತೋರುತ್ತಿದ್ದಾರೆ. ಅವರಿಗೆ ನಾವು ಇನ್ನಷ್ಟು ಬಲ ತುಂಬಬೇಕಿದೆ ಎಂದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement