14 ಬಾರಿ ಅಂಬಾರಿ ಹೊತ್ತಿದ್ದ ದಸರಾ ಆನೆ ಬಲರಾಮ ಅಸ್ವಸ್ಥ

May 7, 2023
10:41 AM

ದಸರಾ ಅಂದರೆ ಥಟ್ಟನೆ ನೆನಪಾಗುವುದು ವಿಶ್ವವಿಖ್ಯಾತ ಜಂಬೂಸವಾರಿಯ ಗಜಪಡೆ. ನಾಡ‌ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಸಾಗುವ ಗಜಪಡೆಯ ಗಜಗಾಂಭೀರ್ಯ ನಡಿಗೆಯನ್ನು ಕಣ್ಣು ತುಂಬಿಕೊಳ್ಳುವುದೇ ರೋಚಕ. ಈ ಮಹತ್ತರ ಜವಾಬ್ದಾರಿಯನ್ನು ಹಲವು ಆನೆಗಳು ಯಶಸ್ವಿಯಾಗಿ ನಿರ್ವಹಿಸಿವೆ. ಅದರಲ್ಲಿ ಪ್ರಮುಖವಾದ ಆನೆ ಬಲರಾಮ. ಸೌಮ್ಯ ಸ್ವಭಾವದ ಬಲರಾಮ ಆನೆ ಒಂದಲ್ಲ ಎರಡಲ್ಲ ಬರೋಬ್ಬರಿ 14 ಬಾರಿ ಅಂಬಾರಿ ಹೊತ್ತಿದ್ದಾನೆ. ದಸರಾದ ಅತ್ಯಂತ ಯಶಸ್ವಿಯಾಗಿ ಜಂಬೂಸವಾರಿ ಜವಾಬ್ದಾರಿ ನಿರ್ವಹಿಸಿದ ಬಲರಾಮ ಈಗ ಅನಾರೋಗ್ಯದಿಂದ ಬಳಲುತ್ತಿದ್ದಾನೆ.

Advertisement
Advertisement

ಬಲರಾಮನಿಗೆ ಚಿಕಿತ್ಸೆ ನೀಡುತ್ತಿರುವ ಪಶು ವೈದ್ಯರ ತಂಡ

ಬಲರಾಮ ತೀವ್ರ ಅಸ್ವಸ್ಥಗೊಂಡಿದ್ದಾನೆ. 67 ವರ್ಷದ ಬಲರಾಮನಿಗೆ ವಯೋಸಹಜ ಆರೋಗ್ಯ ಸಮಸ್ಯೆ ಕಾಡುತ್ತಿದೆ. ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿದೆ. ಬಲರಾಮನಿಗೆ ಕಳೆದ ಹತ್ತು ದಿನಗಳಿಂದ ಬಾಯಲ್ಲಿ ಹುಣ್ಣಾಗಿದೆ. ಇದರಿಂದ ಆಹಾರ ಸೇವಿಸಲು ಸಾಧ್ಯವಾಗದೆ ನಿತ್ರಾಣಗೊಂಡಿದ್ದಾನೆ. ಇದು ಟಿಬಿ(ಕ್ಷಯ) ಇರಬಹುದೆಂದು ವೈದ್ಯರು ಶಂಕಿಸಿದ್ದಾರೆ. ಇದಕ್ಕೆ ಬೇಕಾದ ಅಗತ್ಯ ಪರೀಕ್ಷೆ ನಡೆಸಲಾಗಿದೆ. ಪರೀಕ್ಷಾ ವರದಿ ಬಂದ ನಂತರವಷ್ಟೆ ಇದರ ಕುರಿತು ನಿಖರವಾಗಿ ತಿಳಿಯಲಿದೆ.

ಸ್ಥಳದಲ್ಲೇ ಬೀಡು ಬಿಟ್ಟಿರುವ ತಜ್ಞರು

ಬಲರಾಮನಿಗೆ ಆಹಾರ ಸೇವಿಸಲು ಮಾತ್ರವಲ್ಲ ನೀರು ಕುಡಿಯಲು ಆಗದಂತಹ ಸ್ಥಿತಿ ಉಂಟಾಗಿದೆ. ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿ, ಬಲರಾಮನಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ನಾಗರಹೊಳೆ ಅಭಯಾರಣ್ಯದ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಆರ್‌ಎಫ್‌ಓ ರತ್ನಾಕರ್, ಡಿಆರ್‌ಎಫ್‌ಓ ಸಿದ್ದರಾಜು ನೇತೃತ್ವದ ತಂಡ ಜೊತೆಗೆ ಬಲರಾಮನ ಮಾವುತ ತಿಮ್ಮ, ಕಾವಾಡಿ ಮಂಜನಾಥ, ಇನ್ನಿತರ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಅಸ್ವಸ್ಥಗೊಂಡಿರುವ ಬಲರಾಮನ ಆರೈಕೆಯನ್ನು ನೋಡಿಕೊಳ್ಳುತ್ತಿದ್ದಾರೆ.

ಎಂಡೋಸ್ಕೋಪಿ ವರದಿ

ತೀವ್ರ ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಪಶು ವೈದ್ಯ ಡಾ.ಚೆಟ್ಟಿಯಪ್ಪ, ಡಾ.ಮದನ್, ಡಾ.ರಮೇಶ್ ತಂಡ ಬಲರಾಮನನ್ನು ವಿವಿಧ ಪರೀಕ್ಷೆಗೆ ವಳಪಡಿಸಿದ್ದಾರೆ. ಮೈಸೂರು ಅರಮನೆ ರಾಜ ಕುಟುಂಬದ ನೆರವಿನಿಂದ ಪೋರ್ಟಬಲ್ ಯಂತ್ರದ ಮೂಲಕ ಎಂಡೋಸ್ಕೋಪಿ ಸಹ ಮಾಡಲಾಗಿದೆ. ಇದೆ ವರದಿಗಾಗಿ ಕಾಯಲಾಗುತ್ತಿದ್ದು, ಇದರ ವರದಿ ಬಂದ ನಂತರ ಬಲರಾಮನಿಗೆ ಸೂಕ್ತ ಚಿಕಿತ್ಸೆ ನೀಡಬಹುದಾಗಿದೆ.

ರಾಗಿ ಗಂಜಿ, ಬಾಳೆ ಹಣ್ಣು

ಬಲರಾಮ ಕಳೆದ ಹತ್ತು ದಿನಗಳಿಂದ ತೀವ್ರ ಅಸ್ವಸ್ಥಗೊಂಡಿರುವ ಬಲರಾಮನಿಗೆ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಗಟ್ಟಿ ಆಹಾರ ಸೇವಿಸಲಾಗದ ಬಲರಾಮನಿಗೆ ರಾಗಿ ಗಂಜಿ, ರಾಗಿ ಹಿಟ್ಟು, ಬಾಳೆ ಹಣ್ಣು, ಕಲ್ಲಂಗಡಿ ಹಣ್ಣಿನಂತಹ ಮೆದು ಆಹಾರ ನೀಡಲಾಗುತ್ತಿದೆ.

ಹಾರೈಕೆಗಳ ಮಹಾಪೂರ

ಮೈಸೂರು ದಸರೆಯ ಅಸ್ಮಿತೆ. ಎಲ್ಲರ ಪ್ರೀತಿ ಪಾತ್ರ ಬಲರಾಮ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಅನ್ನೋದು ಎಲ್ಲರ ಆಶಯವಾಗಿದೆ. ಮೈಸೂರು ಮಾತ್ರವಲ್ಲ ಜಗತ್ತಿನ ಹಲವರು ಬಲರಾಮನ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ನಮ್ಮೆಲ್ಲರ ನೆಚ್ಚಿನ ಹೆಮ್ಮೆಯ ಬಲರಾಮ ಆದಷ್ಟು ಬೇಗ ಗುಣಮುಖವಾಗಲಿ ಅನ್ನೋದೆ ನಮ್ಮ ಹಾರೈಕೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror