ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತನಾಡಿದ ಬಳಿಕ ಪ್ರಕರಣ ಆರೋಪಿಗಳ ಬಂಧನ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಈ ಮಾಹಿತಿ ನೀಡಿದ್ದಾರೆ. ಮೈಸೂರು ಗ್ಯಾಂಗ್ ರೇಪ್ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಲ ಹೊತ್ತಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ. ಪೊಲೀಸರು ಅಥವಾ ನಾನು ಅಧಿಕೃತವಾಗಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಪ್ರಕರಣದಲ್ಲಿ ತಮಿಳುನಾಡು ಸತ್ಯಮಂಗಲ ಮೂಲದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು ಬಂಧಿತರೆಲ್ಲರೂ ಕೂಲಿಕಾರ್ಮಿಕರಾಗಿದ್ದಾರೆ ಎನ್ನುವುದು ಈಗಿನ ಮಾಹಿತಿ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel