4 ದಶಕಗಳಲ್ಲೇ ಬರೋಬ್ಬರಿ 1500 ಕೋಟಿ ವಹಿವಾಟು | ಮೈಸೂರು ಸ್ಯಾಂಡಲ್ ಸೋಪ್ ಉತ್ಪಾದಕ ಸಂಸ್ಧೆ KSDLನಿಂದ ಮಹತ್ತರ ಸಾಧನೆ |

June 11, 2024
2:27 PM

ಸೋಪ್‌(Soap) ಅಂದ್ರೆ ಅದು ಮೈಸೂರು ಸ್ಯಾಂಡಲ್‌ ಸೋಪು(Mysore sandal soap). ದಿಕಳೆದಂತೆ ಮಾರುಕಟ್ಟೆಗೆ ಹೊಸ ಹೊಸ ನಮೂನೆ ಪರಿಮಳ ಬೀರುವ ಸಾಬೂನುಗಳು ಲಗ್ಗೆ ಇಟ್ಟವೂ. ಆಗ ನಮ್ಮ ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಟಂಲ್‌ ಸೋಪ್‌ ಬದಿಗೆ ಸರಿಯಿತು. ಆದರೆ ಸರ್ಕಾರ(Govt) ಹಾಗೂ ಆಡಳಿತ ಮಂಡಳಿ ಇತರ ಸಾಬೂನುಗಳೊಂದಿಗೆ ಮಾರುಕಟ್ಟೆಯಲ್ಲಿ(Market) ನಿಲ್ಲಲ್ಲು ಅವಿರತ ಪ್ರಯತ್ನವನ್ನು ಮಾಡಿದ ಫಲವಾಗಿ ಇಂದು ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸೋಪ್​ ಉತ್ಪಾದಕ ಸಂಸ್ಥೆ KSDL ಮತ್ತೊಂದು ಮಹತ್ತರ ಸಾಧನೆ ಮಾಡಿದೆ. ಇದೇ ಮಾರ್ಚ್ 31ಕ್ಕೆ ಅಂತ್ಯಗೊಳ್ಳುವಂತೆ 4 ದಶಕಗಳಲ್ಲೇ ಅತ್ಯಧಿಕ ಎನಿಸುವ ರೂ. 1,500 ಕೋಟಿ ವಹಿವಾಟು(Business) ನಡೆಸಿ ಹೊಸ ಇತಿಹಾಸ ಸೃಷ್ಟಿಸಿದೆ.

Advertisement
Advertisement
Advertisement

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸಂತಸ ವ್ಯಕ್ತಪಡಿಸಿದ  ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್, ಇದೇ ವೇಳೆ “ರಾಜ್ಯದ ಉದ್ಯಮಗಳನ್ನು ಉಳಿಸಿ, ಬೆಳೆಸುವಲ್ಲಿ ನಮ್ಮ ಸರ್ಕಾರ ಬದ್ಧತೆಯನ್ನು ಪ್ರದರ್ಶಿಸುತ್ತಿದೆ ಮತ್ತು ಈ ಅಭಿವೃದ್ಧಿಯ ಪರ್ವ ಮುಂದುವರೆಯಲಿದೆ” ಎಂದಿದ್ದಾರೆ. ಪಾರಂಪರಿಕ ಹೆಗ್ಗುರುತಾಗಿರುವ ಮೈಸೂರು ಸ್ಯಾಂಡಲ್ ಸೋಪ್​ಗೆ ವಿಶ್ವದಾದ್ಯಂತ ಗ್ರಾಹಕರಿದ್ದಾರೆ. ಸರ್ಕಾರದ ಅಧೀನ ಸಂಸ್ಥೆಯಾದ ಕರ್ನಾಟಕ ಸೋಪ್ಸ್ ಆ್ಯಂಡ್​ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್)ನಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಾಗುತ್ತಿದೆ. ಮೈಸೂರು ಸ್ಯಾಂಡಲ್ ಸೋಪ್ ಕರ್ನಾಟಕ ರಾಜ್ಯದ ಹೆಮ್ಮೆಯ ಉತ್ಪನ್ನವಾಗಿದೆ. ಸರ್ಕಾರದ ಸಂಸ್ಥೆಯಾಗಿ ಲಾಭ ಗಳಿಕೆ ಮಾಡುತ್ತಿರುವುದು ಕನ್ನಡಿಗರಾದ ನಾವು ಹೆಮ್ಮೆ ಪಡುವ ವಿಷಯವಾಗಿದೆ ಎಂದು ಮಧ್ಯಮ ಕೈಗಾರಿಕೆಗಳ ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

ಮೈಸೂರು ಸ್ಯಾಂಡಲ್ ಸೋಪ್ ಕಳೆದ 40 ವರ್ಷಗಳಲ್ಲಿ ಗರಿಷ್ಠ ಮಾರಾಟ ವಹಿವಾಟು ದಾಖಲಿಸಿದೆ. ಮಾರ್ಚ್ 2024ರ ವೇಳೆಗೆ 1,500 ಕೋಟಿ ರೂ.ಗಳನ್ನು ಮೀರಿ ವಹಿವಾಟು ನಡೆಸಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮಾರಾಟದಲ್ಲಿ 195 ಕೋಟಿ ರೂಪಾಯಿ ಏರಿಕೆಯಾಗಿದ್ದು, ಇದು ಶೇಕಡಾ 14.25 ರಷ್ಟು ಬೆಳವಣಿಗೆಯಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕೆಎಸ್‌ಡಿಎಲ್ ಸಂಸ್ಥೆ ಶವರ್ ಜೆಲ್‌ಗಳು, ಮೈಸೂರು ಸ್ಯಾಂಡಲ್ ವೇವ್ ಡಿಯೋ ಸೋಪ್, ಗ್ಲಿಸರಿನ್ ಆಧಾರಿತ ಪಾರದರ್ಶಕ ಸ್ನಾನದ ಬಾರ್ ಮತ್ತು ಸೂಪರ್ ಪ್ರೀಮಿಯಂ ಬಾತ್ ಸೋಪ್ ಸೇರಿದಂತೆ 21 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಉತ್ಪನ್ನಗಳಲ್ಲಿ ಮೈಸೂರು ಸ್ಯಾಂಡಲ್ ಮಿಲೇನಿಯಂ ಗೋಲ್ಡ್ ವಿಶೇಷತೆ ಹೊಂದಿದ್ದು, 100 ಗ್ರಾಂ ಸೋಪಿನ ಬೆಲೆ 1,000 ರೂಪಾಯಿ ಇದೆ. ಮೈಸೂರು ಸ್ಯಾಂಡಲ್ ಸೋಪ್ ತನ್ನ ಸಾಬೂನುಗಳಲ್ಲಿ ಶುದ್ಧ ಶ್ರೀಗಂಧದ ಎಣ್ಣೆಯನ್ನು ಬಳಸುವುದಕ್ಕೆ ಹೆಸರುವಾಸಿಯಾಗಿದೆ. ಸರ್ಕಾರದ ಸ್ವಾದೀನದಲ್ಲಿರುವ ಕಂಪನಿ ಉತ್ತಮ ವಹಿವಾಟು ನಡೆಸಿರುವುದು ರಾಜ್ಯಕ್ಕೆ ಹೆಮ್ಮೆಯ ವಿಷಯವೂ ಹೌದು.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮೇಲೆ ಕ್ಯಾನ್ಸರ್‌ ತೂಗುಗತ್ತಿಯ ಭಯ ಏಕೆ ? | ಅಡಿಕೆಯ ಔಷಧೀಯ ಅಧ್ಯಯನ ಸಾಕಷ್ಟಿದೆ | ಈಗ ಸಂಘಟಿತ ಹೋರಾಟ ಅಗತ್ಯ |
November 22, 2024
9:02 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಯಾನ್ಸರ್‌ಕಾರಕವಲ್ಲ | WHO ವರದಿ ಸತ್ಯಕ್ಕೆ ದೂರವಾದುದು | ಅಧ್ಯಯನದ ನೆರವಿಗೆ ಕೇಂದ್ರ ಸರ್ಕಾರಕ್ಕೆ ಮನವಿ | ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿಕೆ |
November 22, 2024
4:02 PM
by: ದ ರೂರಲ್ ಮಿರರ್.ಕಾಂ
ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |
November 22, 2024
2:32 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror