ಮೈಸೂರು ಮೃಗಾಲಯದ ಪ್ರವೇಶ ದರ ಹೆಚ್ಚಳ | ಶೇಕಡ 20 ರಷ್ಟು ಹೆಚ್ಚಳ

August 1, 2025
7:43 PM

ಮೈಸೂರು ಮೃಗಾಲಯದ ಪ್ರವೇಶ ದರ ಶೇಕಡ 20ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಮೃಗಾಲಯ ಕಾರ್ಯನಿರ್ವಾಹಕ ಅಧಿಕಾರಿ ರಂಗಸ್ವಾಮಿ ತಿಳಿಸಿದ್ದಾರೆ. ಇತ್ತೀಚೆಗೆ ಜರ್ಮನ್, ಆಫ್ರಿಕಾದಿಂದ ತಂದಿರುವ ಹಂಟರ್ ಗೊರಿಲ್ಲಾ, ಚೀತಾ, ಜಾಗ್ವಾರ್ ಸೇರಿದಂತೆ ಅನೇಕ ಪ್ರಾಣಿಗಳನ್ನು ಸಾಕುವ ವೆಚ್ಚ ದುಬಾರಿಯಾದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪ್ರವೇಶ ದರ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು.  ನಾಲ್ಕು ವರ್ಷಗಳ ನಂತರ ದರ ಪರಿಷ್ಕರಣೆ ಮಾಡಲಾಗಿದ್ದು, ವಯಸ್ಕರಿಗೆ 100 ರೂಪಾಯಿ ಇದ್ದ ಟಿಕೆಟ್ ದರ 120 ರೂಪಾಯಿಗೆ ಏರಿಕೆಯಾಗಿದೆ. ಮಕ್ಕಳಿಗೆ 50 ರೂಪಾಯಿ ಇದ್ದ ದರ, 60 ರೂಪಾಯಿ ಏರಿಕೆಯಾಗಿದೆ. ಮೃಗಾಲಯ, ಕಾರಂಜಿ ಕಾಂಬೋಗೆ ವಯಸ್ಕರಿಗೆ 150 ರೂಪಾಯಿ ನಿಗದಿಯಾಗಿದ್ದು, ಮಕ್ಕಳಿಗೆ 80 ರೂಪಾಯಿ ನಿಗದಿ ಮಾಡಲಾಗಿದೆ ಎಂದು ವಿವರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror