ಮೈಸೂರು ಮೃಗಾಲಯದ ಪ್ರವೇಶ ದರ ಶೇಕಡ 20ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಮೃಗಾಲಯ ಕಾರ್ಯನಿರ್ವಾಹಕ ಅಧಿಕಾರಿ ರಂಗಸ್ವಾಮಿ ತಿಳಿಸಿದ್ದಾರೆ. ಇತ್ತೀಚೆಗೆ ಜರ್ಮನ್, ಆಫ್ರಿಕಾದಿಂದ ತಂದಿರುವ ಹಂಟರ್ ಗೊರಿಲ್ಲಾ, ಚೀತಾ, ಜಾಗ್ವಾರ್ ಸೇರಿದಂತೆ ಅನೇಕ ಪ್ರಾಣಿಗಳನ್ನು ಸಾಕುವ ವೆಚ್ಚ ದುಬಾರಿಯಾದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪ್ರವೇಶ ದರ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು. ನಾಲ್ಕು ವರ್ಷಗಳ ನಂತರ ದರ ಪರಿಷ್ಕರಣೆ ಮಾಡಲಾಗಿದ್ದು, ವಯಸ್ಕರಿಗೆ 100 ರೂಪಾಯಿ ಇದ್ದ ಟಿಕೆಟ್ ದರ 120 ರೂಪಾಯಿಗೆ ಏರಿಕೆಯಾಗಿದೆ. ಮಕ್ಕಳಿಗೆ 50 ರೂಪಾಯಿ ಇದ್ದ ದರ, 60 ರೂಪಾಯಿ ಏರಿಕೆಯಾಗಿದೆ. ಮೃಗಾಲಯ, ಕಾರಂಜಿ ಕಾಂಬೋಗೆ ವಯಸ್ಕರಿಗೆ 150 ರೂಪಾಯಿ ನಿಗದಿಯಾಗಿದ್ದು, ಮಕ್ಕಳಿಗೆ 80 ರೂಪಾಯಿ ನಿಗದಿ ಮಾಡಲಾಗಿದೆ ಎಂದು ವಿವರಿಸಿದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…