ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ, ಇನ್ನು 15 ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಕ್ಕೆ ನಿಲ್ಲುತ್ತದೆ. ಕಾಂಗ್ರೆಸ್ 150 ಸ್ಥಾನಕ್ಕೆ ಬರುತ್ತದೆ ಎಂದು ವಿಶ್ವಾಸಪಡಿಸಿದರು.
ಯಾರನ್ನೋ ಸೋಲಿಸುವುದೇ ನಿಮ್ಮ ಗುರಿಯೇ? ಬಿಜೆಪಿಯಿಂದ ಯಾರಿಗೆ ಅನುಕೂಲ ಆಗಿದೆ? ರೈತರು, ವರ್ತಕರು, ಯುವಕರಿಗೆ ಮೋಸ ಮಾಡಿದೆ. ಆದ್ದರಿಂದ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಇದನ್ನು ನಾನು ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದು ತಿರುಗೇಟು ನೀಡಿದರು.
ಲಿಂಗಾಯತ ನಾಯಕರ ಜೊತೆಗೆ ಸಭೆ ಬಳಿಕ ಮಾತನಾಡಿದ್ದ ಯಡಿಯೂಪ್ಪ ಅವರು, ಶೆಟ್ಟರ್’ಗೆ ನಾವು ಏನು ಅನ್ಯಾಯ ಮಾಡಿದ್ದೇವೆ. ವಿಶೇಷ ಕಾರಣಕ್ಕೆ ಅಭ್ಯರ್ಥಿ ಮಾಡಲಾಗುತ್ತಿಲ್ಲ. ಬದಲಾಗಿ ಕೇಂದ್ರದಲ್ಲಿ ಸಚಿವ ಸ್ಥಾನ, ಪತ್ನಿಗೆ ಟಿಕೆಟ್ ನೀಡುತ್ತೇವೆಂದು ಹೇಳಿದರೂ ಪಕ್ಷಕ್ಕೆ ದ್ರೋಹ ಎಸಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಎಲ್ಲಾ ಅಧಿಕಾರವನ್ನು ನೀಡಿದಾಗಲೂ ಪಕ್ಷಕ್ಕೆ ದ್ರೋಹ ಮಾಡಿ ಕಾಂಗ್ರೆಸ್ ಸೇರಿರುವ ಜಗದೀಶ ಶೆಟ್ಟರ ಅವರಿಗೆ ತಕ್ಕಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸಲು ಸಾಧ್ಯವಿಲ್ಲ. ಈ ಬಾರಿ ಶೆಟ್ಟರ್ ಗೆಲ್ಲಲು ಸಾಧ್ಯವಿಲ್ಲ. ಇದನ್ನು ನಾನು ನನ್ನ ರಕ್ತದಲ್ಲಿ ಬರೆದುಕೊಡುತ್ತೇನೆ. ಪಕ್ಷದ ಅಭ್ಯರ್ಥಿಗಳ ಗೆಲ್ಲಿಸಲು ನಾನು ನಾಲ್ಕೈದು ಬಾರಿ ಪ್ರಚಾರಕ್ಕೆ ಬರುತ್ತೇನೆಂದು ಹೇಳಿದ್ದರು. ಈ ಹೇಳಿಕೆ ಇಂದು ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…