ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

May 8, 2026
7:35 AM
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ ಯದುವೀರ್ ಒಡೆಯರ್ ಭರವಸೆ ನೀಡಿದ್ದಾರೆ. ಯೋಜನೆ ವ್ಯಾಪ್ತಿಯ ಶೇಕಡ 90 ರಷ್ಟು ಮರಗಳನ್ನು ಉಳಿಸಲು ಸೂಚನೆ ನೀಡಲಾಗಿದೆ.

ಅಭಿವೃದ್ಧಿ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಮೈಸೂರು-ಬೆಂಗಳೂರು ಹೊರವರ್ತುಲ ರಸ್ತೆ ಬಳಿ ಇಂದು ಮೇಲ್ಸೇತುವೆ ಕಾಮಗಾರಿಗೂ ಮುನ್ನ ಸ್ಥಳ ಪರಿಶೀಲನೆ ನಡೆಸಿದ ಅವರು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಮೈಸೂರು: ನಗರಾಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಯನ್ನು ಸಮತೋಲನದಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್  ಹೇಳಿದರು.

ಮೈಸೂರು-ಬೆಂಗಳೂರು ಹೊರವರ್ತುಲ ರಸ್ತೆ ಬಳಿ ಕೈಗೆತ್ತಿಕೊಳ್ಳಲಿರುವ ಮೇಲ್ಸೇತುವೆ ಕಾಮಗಾರಿಗೆ ಮುನ್ನ ಸ್ಥಳ ಪರಿಶೀಲನೆ ನಡೆಸಿದ ಅವರು, ಸಂಬಂಧಿತ ಹಿರಿಯ ಅಧಿಕಾರಿಗಳೊಂದಿಗೆ ಯೋಜನೆಯ ವಿವಿಧ ಅಂಶಗಳ ಕುರಿತು ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಮೈಸೂರು ಜಿಲ್ಲೆಯ ವಿವಿಧೆಡೆ ಸುಮಾರು ₹700 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

“ಕಾಮಗಾರಿ ಆರಂಭಿಸುವ ಮೊದಲು ಗಿಡ-ಮರಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಯೋಜನೆ ವ್ಯಾಪ್ತಿಯಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ 150ಕ್ಕೂ ಹೆಚ್ಚು ಮರಗಳು ಇದ್ದು, ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

ಇದಲ್ಲದೆ, ಶೇಕಡ 90 ರಷ್ಟು ಮರಗಳನ್ನು ಸ್ಥಳದಲ್ಲೇ ಉಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಅವರು, ಪರಿಸರವಾದಿಗಳು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ನಗರಾಭಿವೃದ್ಧಿ ಕಾಮಗಾರಿಗಳ ನಡುವೆ ಪರಿಸರ ಸಂರಕ್ಷಣೆಯನ್ನೂ ಸಮಾನವಾಗಿ ಗಮನದಲ್ಲಿಟ್ಟುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

Mysuru MP Yaduveer Krishnadatta Chamaraja Wadiyar assured that no trees would be cut in the name of development during the construction of flyovers near Mysuru. He said nearly 90% of the existing trees along the project stretch would be preserved while implementing flyover works worth around ₹700 crore across Mysuru district.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror