ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಪತ್ರಕರ್ತ, ಲೇಖಕ ನಾ. ಕಾರಂತ ಪೆರಾಜೆಯವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮುಂದೆ ಓದಿ
ಪ್ರಶಸ್ತಿಗೆ ಸುಧಾ ಸಾಪ್ತಾಹಿಕದಲ್ಲಿ ಪ್ರಕಟವಾದ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರ ವ್ಯಕ್ತಿಚಿತ್ರ ‘ಗುಡ್ಡದ ಜೀವಕ್ಕೆ ಪದ್ಮಶ್ರೀ ಬಾಗಿನ’ ಲೇಖನವು ಆಯ್ಕೆಯಾಗಿದೆ. ಫೆಬ್ರವರಿ 3, 4 ರಂದು ದಾವಣಗೆರೆಯಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ರಾಜ್ಯದ ಐವತ್ತರಷ್ಟು ಪತ್ರಕರ್ತರು ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುತ್ತಾರೆ.
2023ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಆಯೋಜಿಸುವ ‘ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ನಾ. ಕಾರಂತ ಪೆರಾಜೆಯವರ ‘ಗಾಂಧಿ ಭಾರತ, ಗ್ರಾಮ ಭಾರತ’ ಲೇಖನವು ಆಯ್ಕೆಯಾಗಿತ್ತು.ಮುಂದೆ ಓದಿ
ನಾ. ಕಾರಂತ ಪೆರಾಜೆಯವರು ಕೃಷಿ ಮಾಸಿಕ ‘ಅಡಿಕೆ ಪತ್ರಿಕೆ’ಯಲ್ಲಿ ಸಹಾಯಕ ಸಂಪಾದಕರು. ನಾಡಿನ ವಿವಿಧ ಪತ್ರಿಕೆಗಳಲ್ಲಿ ಅಂಕಣಕಾರರು. ಕೃಷಿ ಹಾಗೂ ಯಕ್ಷಗಾನ ಕುರಿತಾಗಿ ಐವತ್ತರಷ್ಟು ಕೃತಿಗಳು ಪ್ರಕಟವಾಗಿವೆ. ಯಕ್ಷಗಾನಕ್ಕೆ ಸಂಬಂಧಪಟ್ಟಂತೆ ‘ಸಾಮಗ ಪಡಿದನಿ’ ಕೃತಿಗೆ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ಪ್ರಶಸ್ತಿ, 2012ರಲ್ಲಿ ಕರ್ನಾಟಕ ಸರಕಾರದ ‘ಪರಿಸರ ಪತ್ರಿಕೋದ್ಯಮ ಪ್ರಶಸ್ತಿ’, ಗ್ರಾಮೀಣ ಪತ್ರಿಕೋದ್ಯಮ ವಿಭಾಗದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ, ಪ.ಗೋ.ಪ್ರಶಸ್ತಿ, ಲ್ಯಾಡ್ಲಿ ಮೀಡಿಯಾ ಪ್ರಶಸ್ತಿ, ಕೃಷಿ ಮಾಧ್ಯಮ ಕೇಂದ್ರದ ಪ್ರಶಸ್ತಿ.. ಹೀಗೆ ಅನ್ಯಾನ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಪದ್ಮಶ್ರೀ ಹರೇಕಳ ಹಾಜಬ್ಬರ ಸಾಧನೆಯ ‘ಅಕ್ಷರ ಯೋಗಿಯ ನೋಡಲ್ಲಿ’ ಲೇಖನವು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಹಾಗೂ ದಾವಣಗೆರೆ ವಿಶ್ವವಿದ್ಯಾಲಯಗಳ ವಾಣಿಜ್ಯ ವಿಭಾಗದ ಕನ್ನಡ ಪಠ್ಯದಲ್ಲಿ ಸೇರಿದ್ದುವು. ಅಲ್ಲದೆ ಎರಡು ಕೃಷಿ ಸಂಬಂಧಿ ಲೇಖನಗಳು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಸೇರ್ಪಡೆಗೊಂಡಿದ್ದವು. ನಾ. ಕಾರಂತರು 2017ರಲ್ಲಿ ಪುತ್ತೂರು ತಾಲೂಕು ಹದಿನೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…