ಸುನಾದ ಸಂಗೀತ ಕಲಾ ಶಾಲೆಯ ಶಿಷ್ಯ ವೃಂದದ ವತಿಯಿಂದ ಮೇ.8 ರಂದು ಭಾನುವಾರ ಪುತ್ತೂರಿನ ಸುದಾನ ವಸತಿಯುತ ಶಾಲಾ ಆವರಣದಲ್ಲಿ ನಾದ ವೈಭವಂ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದ್ವಾನ್ ಸಂದೀಪ್ ನಾರಾಯಣ್ ಅವರಿಂದ ಹಾಡುಗಾರಿಕೆ ನಡೆಯಲಿದೆ.
ಸಂಜೆ 5.30 ರಿಂದ ನಡೆಯುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡುವರು. ಸಭಾಧ್ಯಕ್ಷತೆಯನ್ನು ಹಿರಿಯ ನ್ಯಾಯವಾದಿ ಕೆ ಆರ್ ಆಚಾರ್ಯ ವಹಿಸುವರು. ಸುನಾದ ಸಂಗೀತ ಕಲಾ ಶಾಲೆಯ ನಿರ್ದೇಶಕ ವಿದ್ವಾನ್ ಕಾಂಚನ ಈಶ್ವರ ಭಟ್, ನಾದ ವೈಭವಂ ಅಧ್ಯಕ್ಷ ಪ್ರಕಾಶ್ ಹಾಸನಡ್ಕ ವೇದಿಕೆಯಲ್ಲಿ ಉಪಸ್ಥಿತರಿರುವರು.
ಬಳಿಕ ನಡೆಯುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ವಿದ್ವಾನ್ ಸಂದೀಪ್ ನಾರಾಯಣ್ ಅವರಿಂದ ಹಾಡುಗಾರಿಕೆ ನಡೆಯಲಿದೆ.ವಯಲಿನ್‌ನಲ್ಲಿ ವಿದ್ವಾನ್ ಮೈಸೂರು ವಿ ಶ್ರೀಕಾಂತ್ , ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂ ನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ಭಾಗವಹಿಸುವರು ಎಂದು ನಾದ ವೈಭವಂ ಪ್ರಕಟಣೆ ತಿಳಿಸಿದೆ.
ವಿದ್ವಾನ್ ಸಂದೀಪ್ ನಾರಾಯಣ್ ಅವರ ಸಂಗೀತ ಕಛೇರಿಯ ಯೂಟ್ಯೂಬ್ ಕಡತ ವಿಡಿಯೋ
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…