ಭಾರೀ ಮಳೆ | ಕಾರಿಗೆ ಅಪ್ಪಳಿಸಿದ ಬೃಹತ್ ಬಂಡೆ | ‌ ಇಬ್ಬರು ಬಲಿ | ಹಲವರಿಗೆ ಗಾಯ | ನಾಗಾಲ್ಯಾಂಡ್‌ನಲ್ಲಿ ಘಟನೆ |

July 4, 2023
10:54 PM
ಭಾರೀ ಮಳೆಗೆ ನಾಗಾಲ್ಯಾಂಡ್‌ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಈ ಸಂದರ್ಭ ಕಾರುಗಳ ಮೇಲೆ ಬೃಹತ್‌ ಬಂಡೆ ಅಪ್ಪಳಿಸಿದೆ.

ದೇಶದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ನಾಗಾಲ್ಯಾಂಡ್‌ನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಬೃಹತ್‌ ಬಂಡೆ ಕುಸಿದು ಅಪ್ಪಳಿಸಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಇದರಿಂದ ಇಬ್ಬರು ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.

ನಾಗಾಲ್ಯಾಂಡ್‌ನ ದಿಮಾಪುರ್ ಮತ್ತು ಕೊಹಿಮಾ ನಡುವಿನ ಚುಮೌಕೆಡಿಮಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 29 ರಲ್ಲಿ ಭಾರೀ ಮಳೆಯ  ನಡುವೆ ಸಂಜೆ 5 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಹಿಮಾ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳನ್ನು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಗುಡ್ಡದಿಂದ ಕುಸಿದ ಬಂಡೆಯು ಒಂದು ಕಾರನ್ನು ಪುಡಿ ಮಾಡಿ ಮತ್ತೆರಡು ವಾಹನಗಳನ್ನು ಪುಡಿ ಮಾಡಿದೆ. ಈ ದೃಶ್ಯ ಹಿಂದೆ ಕಾಯುತ್ತಿದ್ದ ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭಾರೀ ಮಳೆ ಹಾಗೂ ರಸ್ತೆ ಬ್ಲಾಕ್‌ ಕಾರಣದಿಂದ ವಾಹನಗಳು ರಸ್ತೆಯಲ್ಲಿ ಕಾಯುತ್ತಿದ್ದವು. ಈ ಸಂದರ್ಭ ಗುಡ್ಡದಿಂದ ಬಂಡೆ ಅಪ್ಪಳಿಸಿದೆ.

(ಮೂಲ : ಪಿಟಿಐ )

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror