ದೇಶದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ನಾಗಾಲ್ಯಾಂಡ್‌ನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಬೃಹತ್ ಬಂಡೆ ಕುಸಿದು ಅಪ್ಪಳಿಸಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಇದರಿಂದ ಇಬ್ಬರು ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.
ನಾಗಾಲ್ಯಾಂಡ್‌ನ ದಿಮಾಪುರ್ ಮತ್ತು ಕೊಹಿಮಾ ನಡುವಿನ ಚುಮೌಕೆಡಿಮಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 29 ರಲ್ಲಿ ಭಾರೀ ಮಳೆಯ ನಡುವೆ ಸಂಜೆ 5 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಹಿಮಾ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳನ್ನು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಗುಡ್ಡದಿಂದ ಕುಸಿದ ಬಂಡೆಯು ಒಂದು ಕಾರನ್ನು ಪುಡಿ ಮಾಡಿ ಮತ್ತೆರಡು ವಾಹನಗಳನ್ನು ಪುಡಿ ಮಾಡಿದೆ. ಈ ದೃಶ್ಯ ಹಿಂದೆ ಕಾಯುತ್ತಿದ್ದ ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭಾರೀ ಮಳೆ ಹಾಗೂ ರಸ್ತೆ ಬ್ಲಾಕ್ ಕಾರಣದಿಂದ ವಾಹನಗಳು ರಸ್ತೆಯಲ್ಲಿ ಕಾಯುತ್ತಿದ್ದವು. ಈ ಸಂದರ್ಭ ಗುಡ್ಡದಿಂದ ಬಂಡೆ ಅಪ್ಪಳಿಸಿದೆ.
(ಮೂಲ : ಪಿಟಿಐ )
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…