#NagaraPanchami | ಎಲ್ಲೆಲ್ಲೂ ನಾಗರಪಂಚಮಿ ಸಂಭ್ರಮ | ಪ್ರಕೃತಿಯ ಆರಾಧನೆಯ ಭಾಗವಾಗಿ ಮಲೆನಾಡ ನಾಗರ ಪಂಚಮಿ

August 19, 2023
5:02 PM
ಮಲೆನಾಡು ಮತ್ತು ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು.

ಈ ಬಾರಿ ನಾಗರ ಪಂಚಮಿಯನ್ನು #NagaraPanchami ಆಗಸ್ಟ್‌ 21 ರಂದು ಆಚರಿಸಲಾಗುವುದು. ಈ ದಿನದಂದು ನಾಗನನ್ನು ಪೂಜಿಸಲಾಗುತ್ತದೆ. ವಾಸುಕಿ ನಾಗನು ಸಮುದ್ರ ಮಂಥನ ಸಮಯದಲ್ಲಿ ದೇವತೆಗಳಿಗೆ ಸಹಾಯ ಮಾಡಿದ್ದನು. ಆದ್ದರಿಂದ ದೇವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಈ ಹಬ್ಬವನ್ನು ನಾಗಪಂಚಮಿಯ ದಿನದಂದು ಆಚರಿಸಲಾಗುತ್ತದೆ. 

ಹೀಗೆ ಮಲೆನಾಡು, ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು. ಊರ ಹೊರಗಿನ ಕಾಡಿನ ಭಾಗದಲ್ಲಿರುವ ನಾಗರ ಕಟ್ಟೆಗೆ ಅಥವಾ ಅರಳಿ ಮರದ ಕೆಳಗಿನ ನಾಗರ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಈ ಹಬ್ಬ ಪ್ರಕೃತಿಯ ಆರಾಧನೆ ಒಂದು ಭಾಗವಾಗಿ ಮಲೆನಾಡಲ್ಲಿ ಕಂಡು ಬರುತ್ತದೆ.

ನಾಗನಿಗೆ ಮಲೆನಾಡಿನ ಭಾಗದಲ್ಲಿ ಗುಡಿಗಳು ಕಡಿಮೆ. ಹಾಗೆ ನೆಲದ ಮೇಲೋ, ಅಥವ ಕಟ್ಟೆಯ ಮೇಲೆ ನಾಗರ ಕಲ್ಲುಗಳಿರುತ್ತವೆ. ಶತಶತಮಾನದ ನಾಗರ ಕಲ್ಲುಗಳು ಮಲೆನಾಡಿನ ಮೂಲೆ ಮೂಲೆಯಲ್ಲೂ ಕಾಣ ಸಿಗುತ್ತವೆ. ಅವಗಳಿಗೆ ಇದ್ದಂತೆಯೇ ಪೂಜೆಗಳು ನಡೆಯುತ್ತವೆ. ನಾಗರ ಪಂಚಮಿ ಬಳಿಕ ದೀಪಾವಳಿಗೆ ಇದೇ ನಾಗರ ಕ್ಲಲುಗಳಿಗೆ ಪೂಜೆ ನಡೆಯುತ್ತದೆ. ಬಳಿಕ ಒಂದು ವರ್ಷದ ವರೆಗೂ ಯಾವ ಪೂಜೆಗಳನ್ನು ಇವುಗಳಿಗೆ ಮಾಡಲಾಗುವುದಿಲ್ಲ. ಮತ್ತೆ ನಾಗರ ಪಂಚಮಿಗೆ ಅವುಗಳಿಗೆ ಪೂಜೆ ಮತ್ತು ನೈವೇದ್ಯ.

ಆ ದಿನದ ವಿಶೇಷವಾಗಿ ಪೂಜೆಗೆ ಹೂವು, ಹಣ್ಣು, ಹಾಲು ಹಾಗೂ ನೈವೇದ್ಯಕ್ಕೆ ರವೆ ಉಂಡೆ ಇಡಲಾಗುತ್ತದೆ. ಕೇದಿಗೆ ಹೂವು ವಿಶೇಷವಾಗಿ ಪೂಜೆಗೆ ಬಳಕೆ ಆಗುತ್ತದೆ. ಇನ್ನೂ ಹುತ್ತದ ಆರಾಧನೆ ಎಲ್ಲೂ ಕಂಡು ಬರುವುದಿಲ್ಲ. ಆ ದಿನ ರಾತ್ರಿ ಕೈಗೆ ಮದರಂಗಿ ಹಚ್ಚುವಂಥಹ ಪದ್ಧತಿ ಇದೆ. ಈ ಬಗ್ಗೆ ಒಂದು ಮಾತಿದೆ, ಹಾವಿನ ಹಬ್ಬದಲ್ಲಿ ಹಚ್ಚಿದ ಮದರಂಗಿ ಗೋವಿನ ಹಬ್ಬದ ತನಕ ಇರಬೇಕು ಎನ್ನಲಾಗುತ್ತದೆ. ಗೋವಿನ ಹಬ್ಬ ಎಂದರೆ ದೀಪಾವಳಿ, ಮಲೆನಾಡಲ್ಲಿ ದೀಪಾವಳಿಯ ದಿನ ಗೋವಿನ ಪೂಜೆ ಮಾಡಲಾಗುತ್ತದೆ.

ನಾಗ ದೇವರನ್ನು ವಿಶೇಷವಾಗಿ ಮಕ್ಕಳಿಲ್ಲದವರು ಪ್ರಾರ್ಥಿಸಿದರೆ ಸಂತಾನ ಭಾಗ್ಯ ಸಿಗಲಿದೆ ಎಂಬ ನಂಬಿಕೆ ಜನರಲ್ಲಿದೆ. ಮನೆಯ ಒಳಗಡೆ ನಾಗನನ್ನು ಪ್ರಾರ್ಥಿಸಲಾಗುತ್ತದೆ. ಆದರೆ ವಿಶೇಷವಾಗಿ ಮನೆಯ ಒಳಭಾಗದಲ್ಲಿ ನಾಗನನ್ನು ಪೂಜಿಸುವ ಪದ್ಧತಿ ಇಲ್ಲ.

(ಸಂಗ್ರಹ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror