ಈ ಬಾರಿ ನಾಗರ ಪಂಚಮಿಯನ್ನು #NagaraPanchami ಆಗಸ್ಟ್ 21 ರಂದು ಆಚರಿಸಲಾಗುವುದು. ಈ ದಿನದಂದು ನಾಗನನ್ನು ಪೂಜಿಸಲಾಗುತ್ತದೆ. ವಾಸುಕಿ ನಾಗನು ಸಮುದ್ರ ಮಂಥನ ಸಮಯದಲ್ಲಿ ದೇವತೆಗಳಿಗೆ ಸಹಾಯ ಮಾಡಿದ್ದನು. ಆದ್ದರಿಂದ ದೇವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಈ ಹಬ್ಬವನ್ನು ನಾಗಪಂಚಮಿಯ ದಿನದಂದು ಆಚರಿಸಲಾಗುತ್ತದೆ.
ಹೀಗೆ ಮಲೆನಾಡು, ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು. ಊರ ಹೊರಗಿನ ಕಾಡಿನ ಭಾಗದಲ್ಲಿರುವ ನಾಗರ ಕಟ್ಟೆಗೆ ಅಥವಾ ಅರಳಿ ಮರದ ಕೆಳಗಿನ ನಾಗರ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಈ ಹಬ್ಬ ಪ್ರಕೃತಿಯ ಆರಾಧನೆ ಒಂದು ಭಾಗವಾಗಿ ಮಲೆನಾಡಲ್ಲಿ ಕಂಡು ಬರುತ್ತದೆ.
ನಾಗನಿಗೆ ಮಲೆನಾಡಿನ ಭಾಗದಲ್ಲಿ ಗುಡಿಗಳು ಕಡಿಮೆ. ಹಾಗೆ ನೆಲದ ಮೇಲೋ, ಅಥವ ಕಟ್ಟೆಯ ಮೇಲೆ ನಾಗರ ಕಲ್ಲುಗಳಿರುತ್ತವೆ. ಶತಶತಮಾನದ ನಾಗರ ಕಲ್ಲುಗಳು ಮಲೆನಾಡಿನ ಮೂಲೆ ಮೂಲೆಯಲ್ಲೂ ಕಾಣ ಸಿಗುತ್ತವೆ. ಅವಗಳಿಗೆ ಇದ್ದಂತೆಯೇ ಪೂಜೆಗಳು ನಡೆಯುತ್ತವೆ. ನಾಗರ ಪಂಚಮಿ ಬಳಿಕ ದೀಪಾವಳಿಗೆ ಇದೇ ನಾಗರ ಕ್ಲಲುಗಳಿಗೆ ಪೂಜೆ ನಡೆಯುತ್ತದೆ. ಬಳಿಕ ಒಂದು ವರ್ಷದ ವರೆಗೂ ಯಾವ ಪೂಜೆಗಳನ್ನು ಇವುಗಳಿಗೆ ಮಾಡಲಾಗುವುದಿಲ್ಲ. ಮತ್ತೆ ನಾಗರ ಪಂಚಮಿಗೆ ಅವುಗಳಿಗೆ ಪೂಜೆ ಮತ್ತು ನೈವೇದ್ಯ.
ಆ ದಿನದ ವಿಶೇಷವಾಗಿ ಪೂಜೆಗೆ ಹೂವು, ಹಣ್ಣು, ಹಾಲು ಹಾಗೂ ನೈವೇದ್ಯಕ್ಕೆ ರವೆ ಉಂಡೆ ಇಡಲಾಗುತ್ತದೆ. ಕೇದಿಗೆ ಹೂವು ವಿಶೇಷವಾಗಿ ಪೂಜೆಗೆ ಬಳಕೆ ಆಗುತ್ತದೆ. ಇನ್ನೂ ಹುತ್ತದ ಆರಾಧನೆ ಎಲ್ಲೂ ಕಂಡು ಬರುವುದಿಲ್ಲ. ಆ ದಿನ ರಾತ್ರಿ ಕೈಗೆ ಮದರಂಗಿ ಹಚ್ಚುವಂಥಹ ಪದ್ಧತಿ ಇದೆ. ಈ ಬಗ್ಗೆ ಒಂದು ಮಾತಿದೆ, ಹಾವಿನ ಹಬ್ಬದಲ್ಲಿ ಹಚ್ಚಿದ ಮದರಂಗಿ ಗೋವಿನ ಹಬ್ಬದ ತನಕ ಇರಬೇಕು ಎನ್ನಲಾಗುತ್ತದೆ. ಗೋವಿನ ಹಬ್ಬ ಎಂದರೆ ದೀಪಾವಳಿ, ಮಲೆನಾಡಲ್ಲಿ ದೀಪಾವಳಿಯ ದಿನ ಗೋವಿನ ಪೂಜೆ ಮಾಡಲಾಗುತ್ತದೆ.
ನಾಗ ದೇವರನ್ನು ವಿಶೇಷವಾಗಿ ಮಕ್ಕಳಿಲ್ಲದವರು ಪ್ರಾರ್ಥಿಸಿದರೆ ಸಂತಾನ ಭಾಗ್ಯ ಸಿಗಲಿದೆ ಎಂಬ ನಂಬಿಕೆ ಜನರಲ್ಲಿದೆ. ಮನೆಯ ಒಳಗಡೆ ನಾಗನನ್ನು ಪ್ರಾರ್ಥಿಸಲಾಗುತ್ತದೆ. ಆದರೆ ವಿಶೇಷವಾಗಿ ಮನೆಯ ಒಳಭಾಗದಲ್ಲಿ ನಾಗನನ್ನು ಪೂಜಿಸುವ ಪದ್ಧತಿ ಇಲ್ಲ.
(ಸಂಗ್ರಹ)
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…