ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರವು ಎ.22 ರಿಂದ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಾಗರಾಜ ಭಟ್, ವಿವಿಧ ಕಾರ್ಯಕ್ರಮಗಳಿಂದ ರಾಜ್ಯ ಹಾಗೂ ಅಂತರ್‍ರಾಜ್ಯಗಳಲ್ಲಿ ಜನಮೆಚ್ಚುಗೆ ಗಳಿಸಿದ ವೇದ-ಯೋಗ-ಕಲಾ ಶಿಬಿರವಾಗಿ ಇದೀಗ ಇಪ್ಪತ್ತೆರಡನೇ ವರ್ಷದ ಸಂಭ್ರಮದಲ್ಲಿದೆ. ಸಣ್ಣ ಮಕ್ಕಳ ದೊಡ್ಡ ರಜೆ ಆರಂಭವಾದೊಡನೆ ಹಲವಾರು ಶಿಬಿರಗಳು ಆರಂಭಗೊಳ್ಳುತ್ತದೆ. ನಾಟಕ ಶಿಬಿರ, ರಂಗ ತರಬೇತಿ ಶಿಬಿರ, ಚಿಣ್ಣರ ಶಿಬಿರ, ನಾಯಕತ್ವ ಶಿಬಿರ ಸೇರಿದಂತೆ ಇನ್ನಿತರ ಶಿಬಿರಗಳು ಅಲ್ಲಲ್ಲಿ ನಡೆದರೂ ಭಾರತದ ಸಾಂಸ್ಕೃತಿಕ ಮೌಲ್ಯಗಳಿಗೆ ಪ್ರಧಾನ ಭೂಮಿಕೆಗಳಾದ ವೇದ ಶಿಬಿರಗಳು ಮಾತ್ರ ಕೆಲವು ಕಡೆ ನಡೆಯುತ್ತದೆಯಷ್ಟೆ. ಅಂತಹ ವೇದ ಶಿಬಿರಗಳಲ್ಲಿ ಒಂದಾದ ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಶಿಬಿರವು ಕಳೆದ 21 ವರ್ಷಗಳಿಂದ ಸಂಪೂರ್ಣ ಉಚಿತವಾಗಿ ವೇದ-ಯೋಗ ಹಾಗೂ ಕಲಾ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯ ಪುಸ್ತಕಗಳೂ, ವ್ಯಾಸಪೀಠ ಇತ್ಯಾದಿಗಳನ್ನು ನೀಡಿ ಸಂಪೂರ್ಣ ಉಚಿತವಾಗಿ ನಡೆಸಿಕೊಂಡು ಬರುತ್ತಿದೆ.
ಎ.12 ಮಂಗಳವಾರವಾರ ಬೆಳಗ್ಗೆ 10.30ಕ್ಕೆ ಶಿಬಿರದ ಹಿರಿಯ ವಿದ್ಯಾರ್ಥಿ, ಮೈಸೂರಿನ ನರರೋಗತಜ್ಞರಾದ ಡಾ| ಶಾಸ್ತಾರ ಪನೆಯಾಲ ಹಾಗೂ ಸೀಮಾ ಶಾಸ್ತಾರ ದಂಪತಿಗಳು ಉದ್ಘಾಟಿಸಲಿದ್ದು, ಸರಣಿ ಶಿವಪೂಜಾ ಅಭಿಯಾನ 2021 ರ ಸಂಚಾಲಕರಾದ ಗೋಪಾಲಕೃಷ್ಣ ಭಟ್ ‘ಶಿವನಿವಾಸ’ ಇವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ವಿನಾಯಕ ಭಟ್ಟ, ಗಾಳಿಮನೆ ಇವರು ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ಸುಳ್ಯ ಹವ್ಯಕ ವಲಯದ ಅಧ್ಯಕ್ಷರಾದ ವಿಷ್ಣುಕಿರಣ ನೀರಬಿದಿರೆ ಇವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿದ್ದು ಶುಭಾಶಂಸನೆಯನ್ನು ಮಾಡಲಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಸರಣಿಶಿವಪೂಜಾ ಅಭಿಯಾನ 2021ರ ಸಂಚಾಲಕರಾದ ಗೋಪಾಲಕೃಷ್ಣ ಭಟ್ ‘ಶಿವನಿವಾಸ’, ಶಿಬಿರ ಸಂಚಾಲಕ ವೇ| ಮೂ| ಅಭಿರಾಮ ಶರ್ಮಾ ಉಪಸ್ಥಿತರಿದ್ದರು.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…