ಚರಂಡಿಗಳಲ್ಲಿ ಮಳೆ ನೀರು ಹರಿವಿಗೆ ತಡೆ ಒಡ್ಡಿದ್ದಲ್ಲಿ ನಿರ್ಧಾಕ್ಷಿಣ್ಯ ತೆರವಿಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೂಚನೆ |

July 8, 2022
10:44 PM

ಮಳೆಯ ನೀರು ರಸ್ತೆ ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದಲ್ಲಿ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ನಿರ್ದೇಶನ ನೀಡಿದರು.

ಅವರು  ಶುಕ್ರವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಗರದಲ್ಲಿ ಮಳೆ ನೀರು ಹರಿದು ಹೋಗದಂತೆ ಎಲ್ಲೆಲ್ಲಿ ಚರಂಡಿಗಳಿಗೆ ತಡೆಗಳನ್ನು ಒಡ್ಡಲಾಗಿದೆಯೋ ಅಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕು, ಬೇಕಿದ್ದರೆ ಯಂತ್ರಗಳನ್ನು ಸಹ ಬಳಸಿಕೊಳ್ಳಿ ಎಂದ ಸಂಸದರು, ಅಗತ್ಯವಿದ್ದರೆ ಪೊಲೀಸರ ನೆರವು ಕೂಡ ಪಡೆಯುವಂತೆ ತಿಳಿಸಿದರು.

ಮಳೆಗಾಲದಲ್ಲಿ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಬೇಕು, ವಿದ್ಯುತ್ ಸೇರಿದಂತೆ ಇತರೆ ಸಮಸ್ಯೆಗಳು ಕಂಡುಬಂದರೆ ಕೂಡಲೇ ಅವುಗಳನ್ನು ನಿಭಾಯಿಸಲು ಅನುಕೂಲವಾಗುವಂತೆ ಸಿಬ್ಬಂದಿಗಳ ದೂರವಾಣಿ, ಮೊಬೈಲ್ ನಂಬರ್ ಗಳನ್ನು ಸಾರ್ವಜನಿಕರ ಅನುಕೂಲಕ್ಕೆ ಪ್ರಕಟಿಸುವಂತೆ ಸೂಚಿಸಿದರು.

ಪ್ರಾಕೃತಿಕ ಸೇರಿದಂತೆ ಯಾವುದೇ ರೀತಿಯ ಅವಘಡಗಳು ಜಿಲ್ಲೆಯಲ್ಲಿ ಸಂಭವಿಸಿದರೆ ಕೂಡಲೇ ಅಲ್ಲಿ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ಮಾರ್ಗದರ್ಶನ ಹಾಗೂ ಚಿಕಿತ್ಸೆಗೆ ನೆರವು ನೀಡುವಂತಹ ವೈದ್ಯರ ತಂಡವನ್ನು ಎಲ್ಲಾ ತಾಲೂಕುಗಳಲ್ಲಿಯೂ ಸನ್ನದ್ದ ಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಅವರಿಗೆ ತಿಳಿಸಿದರು.

ನಗರದಲ್ಲಿ ಮಳೆ ಹಾಗೂ ಪ್ರವಾಹ ಸ್ಥಿತಿಯನ್ನು ಸೂಕ್ತವಾಗಿ ನಿರ್ವಹಣೆ ಮಾಡಲು ನಿಯೋಜಿಸಲಾಗಿರುವ ಮೂವರು ಎಂಜಿನಿಯರುಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು, ಮಳೆಗಾಲವಾದ ಕಾರಣ ಯಾವುದೇ ರಸ್ತೆಗಳನ್ನು ತುಂಡರಿಸಬಾರದು ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಾತನಾಡಿ, ಜಿಲ್ಲಾಧಿಕಾರಿಯವರ ಪಿಡಿ ಖಾತೆಯಲ್ಲಿ 15 ಕೋಟಿ ರೂ.ಗಳ ಅನುದಾನವಿದೆ, ಪ್ರತಿ ತಾಲೂಕಿನ ತಹಶೀಲ್ದಾರರ ಖಾತೆಯಲ್ಲಿ 45 ಲಕ್ಷ ರೂ.ಗಳ ವರೆಗೆ ಹಣವಿದ್ದು, ಮಳೆ, ನೆರೆಯಿಂದಾಗಿ ಮನೆ ಹಾನೀಗೀಡಾದಲ್ಲಿ ಕೂಡಲೇ ಚೆಕ್ ಮೂಲಕ ಪರಿಹಾರ ನೀಡುವಂತೆ ಸೂಚಿಸಲಾಗಿದೆ, ಪ್ರತಿಯೊಂದು ಗ್ರಾಮ ಪಂಚಾಯತ್‍ನಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನೆಯಾಗಿದೆ, ವಿಪರೀತ ಮಳೆಯಿಂದಾಗಿ ಶಾಲಾ ಮಕ್ಕಳಿಗೆ ರಜೆ ನೀಡುವ ಬಗ್ಗೆ ಆಯಾ ಗ್ರಾಮ ವ್ಯಾಪ್ತಿಯಲ್ಲಿ ನಿರ್ಧರಿಸಿ ರಜೆ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆಯ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ ವೇದಿಕೆಯಲ್ಲಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror