ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಹಾಗೂ ಬಂಟ್ವಾಳ ರೈಲು ನಿಲ್ದಾಣಗಳನ್ನು ಅಮೃತ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲು ಅಯ್ಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅಭಿನಂದಿಸಿದ್ದಾರೆ.
ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ದಾಖಲೆ ರೂ.7,561 ಕೋಟಿ ಅನುದಾನ ಒದಗಿಸಿಸುವ ಮೂಲಕ ಬಂಪರ್ ಕೊಡುಗೆಯನ್ನು ನೀಡಿರುವ ಕೇಂದ್ರ ಸರ್ಕಾರವು ಈಗಾಗಲೇ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಯ ಕುರಿತು ಟೆಕ್ನೊ-ಎಕೊನೋಮಿಕ್ ಫಿಸಿಬಲಿಟಿ ಅಧ್ಯಯನವನ್ನು ಪ್ರಾರಂಭಿಸಿದೆ. ಈ ಸಾಲಿನಲ್ಲಿ ರಾಜ್ಯ ರೈಲ್ವೆ ಯೋಜನೆಗಳಿಗೆ ನೀಡಿರುವ ಅನುದಾನವು 2014ಕ್ಕೆ ಹೋಲಿಸಿದಲ್ಲಿ 9 ಪಟ್ಟು ಅಧಿಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…