ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಹೇಳಿಕೆಯನ್ನು ನೀಡಿರುವ ಕಟೀಲ್ ಅವರು, ತಪ್ಪಾಗಿ ಹೇಳಿಕೆಯನ್ನು ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ. ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಬಗ್ಗೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ನಿರ್ಣಯ ಕೈಗೊಳ್ಳುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…