ಜಿಲ್ಲೆ

ಬಳ್ಪ ಸಂಸದರ ಆದರ್ಶ ಗ್ರಾಮ | ದೇಶದ ಯಾವುದೇ ಗ್ರಾಮದಲ್ಲೂ 60 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿಲ್ಲ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಂಸದರ ಆದರ್ಶ ಗ್ರಾಮದಡಿ ಆಯ್ಕೆಯಾಗಿರುವ ಕಡಬ ತಾಲೂಕಿನ ಬಳ್ಪ ಗ್ರಾಮದ ಸಂಪೂರ್ಣ ಅಭಿವೃದ್ಧಿಗಾಗಿ  ವಿವಿಧ ಯೋಜನೆಗಳ ಅನುಷ್ಠಾನಕ್ಕೆ 60 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಸಂಸದರ ಆದರ್ಶ ಗ್ರಾಮದ ಅಡಿಯಲ್ಲಿ ದೇಶದ ಯಾವುದೇ ಗ್ರಾಮದಲ್ಲೂ 60 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿಲ್ಲ. ಜಿಲ್ಲೆಯ ಬಳ್ಪ ಗ್ರಾಮದಲ್ಲಿ ಮಾತ್ರ ಇಷ್ಟು ಮೊತ್ತದ ಹಣವನ್ನು ಖರ್ಚು ಮಾಡಲಾಗುತ್ತಿದೆ. ಅಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಸೆ.2 ರಂದು ಲೋಕಾರ್ಪಣೆ ಮಾಡಲಾಗುವುದು ಹಾಗೂ ಬಾಕಿ ಉಳಿದ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಲು ಪಟ್ಟಿ ಸಿದ್ದಪಡಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Advertisement

ಅವರು  ಮಂಗಳವಾರ ಮಂಗಳೂರು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸದರ ಆದರ್ಶ ಗ್ರಾಮದಡಿ ಆಯ್ಕೆಯಾಗಿರುವ ಕಡಬ ತಾಲೂಕಿನ ಬಳ್ಪ ಗ್ರಾಮದ ಸಂಪೂರ್ಣ ಅಭಿವೃದ್ಧಿಗಾಗಿ ಹಲವಾರು ಕಾಮಗಾರಿಗಳು ಹಾಗೂ ವಿವಿಧ ಯೋಜನೆಗಳ ಅನುಷ್ಠಾನಕ್ಕೆ 60 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಬರುವ ಸೆಪ್ಟಂಬರ್ 2ರಂದು ಅಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಇನ್ನೂ ನೆರವೇರಿಸಬೇಕಾಗಿರುವ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಲು ಪಟ್ಟಿಯೊಂದನ್ನು ಸಿದ್ದಪಡಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಬಳ್ಪ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.

ಕಲ್ಲಡ್ಕ ಫ್ಲೈ ಓವರ್ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಂಸದರು ಸೂಚಿಸಿದಾಗ, ಮುಂದಿನ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ತಿಳಿಸಿದರು.

ಜಿಲ್ಲೆಗೊಂದು ಗೋಶಾಲೆ ಸ್ಥಾಪನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 47.50 ಲಕ್ಷ ರೂ.ಗಳು ಬಿಡುಗಡೆಯಾಗಿವೆ, 10 ಎಕರೆ ಜಾಗಕ್ಕೆ ತಂತಿ ಮೇಲೆ ಅಳವಡಿಸಲಾಗುತ್ತಿದ್ದು, ಈಗಾಗಲೇ ಎರಡು ಕೊಳವೆ ಬಾವಿಗಳನ್ನು ಕೊರೆಸಲಾಗಿದೆ, ಅವುಗಳಲ್ಲಿ ನೀರು ಲಭಿಸಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಸಭೆಗೆ ಮಾಹಿತಿ ನೀಡಿದರು.

ಲೋಕೋಪಯೋಗಿ ಇಲಾಖೆ ವತಿಯಿಂದ ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ ಬಾಕಿ ಉಳಿದಿದ್ದ ಕಾಮಗಾರಿಗಳು ಮಳೆಯಿಂದಾಗಿ ತಡೆಹಿಡಿಯಲಾಗಿದ್ದು, ಮುಂದಿನ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ್ ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಕುರಿತಂತೆ, ಮುಂಬರುವ ಸೆಪ್ಟೆಂಬರ್ 15ರೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ನಂತರ ಪಾರ್ಕ್ ಸ್ಥಾಪನೆಯ ಪ್ರಕ್ರಿಯೆಗಳು ಶೀಘ್ರವಾಗಲಿವೆ ಎಂದು ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್ ವಿವರಿಸಿದರು.

ಮಹಾತ್ಮ ಗಾಂಧಿ ಗ್ರಾಮೀಣ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಗೆ 2022ರ ಜೂನ್ ಮಾಹೆಗೆ ನಿಗದಿ ಪಡಿಸಲಾಗಿದ್ದ ಗುರಿಯನ್ನು ಸಾಧಿಸಲಾಗಿದೆ, ಈ ಯೋಜನೆಯಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಕೆರೆ ಅಭಿವೃದ್ಧಿ ಪಡಿಸುವ ಹಾಗೂ ಶಾಲೆಯ ಕ್ರೀಡಾಂಗಣವನ್ನು ನಿರ್ಮಿಸುವ ಗುರಿ ಹೊಂದಲಾಗಿದೆ, ಕೆರೆಗಳ ಅಭಿವೃದ್ಧಿ ಹಾಗೂ ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ 5 ಕಿ.ಮೀ.ಗಳ ರಸ್ತೆ ಅಭಿವೃದ್ಧಿಪಡಿಸುವ ಕೆಲಸ ಆಗುತ್ತಿದೆ, ಶಾಲೆಗಳಲ್ಲಿ ಮಕ್ಕಳ ಶೌಚಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 174 ಶಾಲೆಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ, ಅಂಗನವಾಡಿಗಳಲ್ಲಿ ಕಾಂಪೌಂಡ್ ನಿರ್ಮಾಣ ಕಾರ್ಯ ಆರಂಭಗೊಂಡಿದೆ ಎಂದು ಡಾ. ಕುಮಾರ್ ತಿಳಿಸಿದರು.

ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನ ಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಇದುವರೆಗೂ ಕೈಗೊಂಡ ಕಾಮಗಾರಿಗಳಲ್ಲಿ ಪೂರ್ಣಗೊಂಡ ಕಾಮಗಾರಿಗಳ ಪಟ್ಟಿಗಳನ್ನು ನೀಡುವಂತೆ ಸಂಸದರು ತಿಳಿಸಿದರು. ಈ ಕಾಮಗಾರಿಗಳನ್ನು ಪ್ರಧಾನ ಮಂತ್ರಿಗಳಿಂದ ಉದ್ಘಾಟಿಸಲು ಅನುಕೂಲವಾಗುವುದು ಹಾಗಾಗಿ ಕೂಡಲೇ ಪಟ್ಟಿ ಒದಗಿಸುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತಿಳಿಸಿದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು. ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ದಿಶಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

6 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

7 hours ago

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…

12 hours ago

2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…

20 hours ago

ಹೀಟ್‌ವೇವ್‌ ಸಂಕಷ್ಟದಲ್ಲಿ ತೆಲಂಗಾಣ-ಹೈದರಾಬಾದ್‌ |

ತೆಲಂಗಾಣ ಹಾಗೂ ಹೈದ್ರಾಬಾದ್‌ ಪ್ರದೇಶದಲ್ಲಿ ಹೀಟ್‌ವೇವ್‌ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…

20 hours ago