ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಮೌಖಿಕವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗೆಂದು ನಳಿನ್ ಕುಮಾರ್ ಕಟೀಲು ಅವರು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಅವರು ಹೇಳಿದರು.
ವಿಧಾನಸಭೆ ಚುನಾವಣೆ ಸೋಲಿನ ನೈತಿನ ಹೊಣೆ ಹೊತ್ತು ತಾನು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಕೆ ಮಾಡಿರುವುದಾಗಿ ಕಟೀಲ್ ಹೇಳಿದ್ದಾರೆ. ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗರಿಷ್ಠ ಸ್ಥಾನ ಗಳಿಸಲು ಬಿಜೆಪಿಯ ರಾಜ್ಯ ಘಟಕ ಸಿದ್ಧತೆ ಆರಂಭಿಸಿದೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದರು.
ಪಕ್ಷವು ರಾಜ್ಯದಲ್ಲಿ ಸೋಲು ಕಂಡಿರುವುದು ಅನಿರೀಕ್ಷಿತ. ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 9 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ನಂಬಿಕೆ ಇದೆ. ಮುಂದೆ ಜನಸಂಪರ್ಕ ಅಭಿಯಾನ ನಡೆಸುತ್ತಿದ್ದು, ಅದರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುತ್ತದೆ.ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕೆಲಸ ನಡೆಯುತ್ತದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಿಸಿಕೊಡಲು ಕೆಲಸ ಆರಂಭವಾಗುತ್ತದೆ ಎಂದು ನಳಿನ್ ಹೇಳಿದರು.