Advertisement
ಸುದ್ದಿಗಳು

#NalinKumarKateel | ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಳಿನ್‌ ಕುಮಾರ್‌ ಕಟೀಲು |

Share

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಮೌಖಿಕವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗೆಂದು ನಳಿನ್‌ ಕುಮಾರ್‌ ಕಟೀಲು ಅವರು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಅವರು ಹೇಳಿದರು.

ವಿಧಾನಸಭೆ ಚುನಾವಣೆ ಸೋಲಿನ ನೈತಿನ ಹೊಣೆ ಹೊತ್ತು ತಾನು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಕೆ ಮಾಡಿರುವುದಾಗಿ  ಕಟೀಲ್‌ ಹೇಳಿದ್ದಾರೆ. ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ.  ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗರಿಷ್ಠ ಸ್ಥಾನ ಗಳಿಸಲು ಬಿಜೆಪಿಯ ರಾಜ್ಯ ಘಟಕ ಸಿದ್ಧತೆ ಆರಂಭಿಸಿದೆ ಎಂದು  ನಳೀನ್ ಕುಮಾರ್ ಕಟೀಲ್ ಹೇಳಿದರು.

ಪಕ್ಷವು ರಾಜ್ಯದಲ್ಲಿ ಸೋಲು ಕಂಡಿರುವುದು ಅನಿರೀಕ್ಷಿತ. ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 9 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ನಂಬಿಕೆ ಇದೆ. ಮುಂದೆ  ಜನಸಂಪರ್ಕ ಅಭಿಯಾನ ನಡೆಸುತ್ತಿದ್ದು, ಅದರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುತ್ತದೆ.ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕೆಲಸ ನಡೆಯುತ್ತದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ರಾಜ್ಯದಲ್ಲಿ  ಗೆಲ್ಲಿಸಿಕೊಡಲು ಕೆಲಸ ಆರಂಭವಾಗುತ್ತದೆ ಎಂದು ನಳಿನ್‌ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

4 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

9 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago