ಮಳೆಯ ನೀರು ರಸ್ತೆ ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದಲ್ಲಿ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ನಿರ್ದೇಶನ ನೀಡಿದರು.
ಅವರು ಶುಕ್ರವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಗರದಲ್ಲಿ ಮಳೆ ನೀರು ಹರಿದು ಹೋಗದಂತೆ ಎಲ್ಲೆಲ್ಲಿ ಚರಂಡಿಗಳಿಗೆ ತಡೆಗಳನ್ನು ಒಡ್ಡಲಾಗಿದೆಯೋ ಅಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕು, ಬೇಕಿದ್ದರೆ ಯಂತ್ರಗಳನ್ನು ಸಹ ಬಳಸಿಕೊಳ್ಳಿ ಎಂದ ಸಂಸದರು, ಅಗತ್ಯವಿದ್ದರೆ ಪೊಲೀಸರ ನೆರವು ಕೂಡ ಪಡೆಯುವಂತೆ ತಿಳಿಸಿದರು.
ಮಳೆಗಾಲದಲ್ಲಿ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಬೇಕು, ವಿದ್ಯುತ್ ಸೇರಿದಂತೆ ಇತರೆ ಸಮಸ್ಯೆಗಳು ಕಂಡುಬಂದರೆ ಕೂಡಲೇ ಅವುಗಳನ್ನು ನಿಭಾಯಿಸಲು ಅನುಕೂಲವಾಗುವಂತೆ ಸಿಬ್ಬಂದಿಗಳ ದೂರವಾಣಿ, ಮೊಬೈಲ್ ನಂಬರ್ ಗಳನ್ನು ಸಾರ್ವಜನಿಕರ ಅನುಕೂಲಕ್ಕೆ ಪ್ರಕಟಿಸುವಂತೆ ಸೂಚಿಸಿದರು. ಪ್ರಾಕೃತಿಕ ಸೇರಿದಂತೆ ಯಾವುದೇ ರೀತಿಯ ಅವಘಡಗಳು ಜಿಲ್ಲೆಯಲ್ಲಿ ಸಂಭವಿಸಿದರೆ ಕೂಡಲೇ ಅಲ್ಲಿ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ಮಾರ್ಗದರ್ಶನ ಹಾಗೂ ಚಿಕಿತ್ಸೆಗೆ ನೆರವು ನೀಡುವಂತಹ ವೈದ್ಯರ ತಂಡವನ್ನು ಎಲ್ಲಾ ತಾಲೂಕುಗಳಲ್ಲಿಯೂ ಸನ್ನದ್ದ ಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಅವರಿಗೆ ತಿಳಿಸಿದರು. ನಗರದಲ್ಲಿ ಮಳೆ ಹಾಗೂ ಪ್ರವಾಹ ಸ್ಥಿತಿಯನ್ನು ಸೂಕ್ತವಾಗಿ ನಿರ್ವಹಣೆ ಮಾಡಲು ನಿಯೋಜಿಸಲಾಗಿರುವ ಮೂವರು ಎಂಜಿನಿಯರುಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು, ಮಳೆಗಾಲವಾದ ಕಾರಣ ಯಾವುದೇ ರಸ್ತೆಗಳನ್ನು ತುಂಡರಿಸಬಾರದು ಎಂದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಾತನಾಡಿ, ಜಿಲ್ಲಾಧಿಕಾರಿಯವರ ಪಿಡಿ ಖಾತೆಯಲ್ಲಿ 15 ಕೋಟಿ ರೂ.ಗಳ ಅನುದಾನವಿದೆ, ಪ್ರತಿ ತಾಲೂಕಿನ ತಹಶೀಲ್ದಾರರ ಖಾತೆಯಲ್ಲಿ 45 ಲಕ್ಷ ರೂ.ಗಳ ವರೆಗೆ ಹಣವಿದ್ದು, ಮಳೆ, ನೆರೆಯಿಂದಾಗಿ ಮನೆ ಹಾನೀಗೀಡಾದಲ್ಲಿ ಕೂಡಲೇ ಚೆಕ್ ಮೂಲಕ ಪರಿಹಾರ ನೀಡುವಂತೆ ಸೂಚಿಸಲಾಗಿದೆ, ಪ್ರತಿಯೊಂದು ಗ್ರಾಮ ಪಂಚಾಯತ್‍ನಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನೆಯಾಗಿದೆ, ವಿಪರೀತ ಮಳೆಯಿಂದಾಗಿ ಶಾಲಾ ಮಕ್ಕಳಿಗೆ ರಜೆ ನೀಡುವ ಬಗ್ಗೆ ಆಯಾ ಗ್ರಾಮ ವ್ಯಾಪ್ತಿಯಲ್ಲಿ ನಿರ್ಧರಿಸಿ ರಜೆ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದರು. ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆಯ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ ವೇದಿಕೆಯಲ್ಲಿದ್ದರು.ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…