Advertisement
MIRROR FOCUS

ಫಲ ನೀಡದ ನಮೀಬಿಯಾ ಚಿರತೆ ಯೋಜನೆ | ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು : 10 ಕ್ಕೇರಿದ ಸಾವಿನ ಸಂಖ್ಯೆ

Share

ಭಾರತಕ್ಕೆ(India) ಆಫ್ರೀಕಾದಿಂದ(Africa) ಚಿರತೆ(Cheetah) ತಂದು ಮಧ್ಯಪ್ರದೇಶದ(Madyapradesh) ಕುನೋ ರಾಷ್ಟ್ರೀಯ ಉದ್ಯಾನದಲ್ಲಿ (Kuno National Park) ಬಿಟ್ಟಾಗಿಂದ ಒಂದಲ್ಲ ಒಂದು ಕೆಟ್ಟ ಸುದ್ದಿಗಳೇ ಕೇಳಿ ಬರುತ್ತಿದೆ. ಚೀತಗಳು  ಮತ್ತೆ ಭಾರತದಲ್ಲಿ ನೆಲೆಯೋರಬೇಕು. ನಶಿಸಿ ಹೋಗಿದ್ದ ಸಂಸತಿಯನ್ನು ಮತ್ತೆ ಅಭಿವೃದ್ಧಿ ಪಡಿಸಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ(Central Govt) ಈ ಮೆಗಾ ಯೋಜನೆಯನ್ನು ಕೈಗೊಂಡಿತ್ತು. ಆದರೆ ಅದ್ಯಾಕೋ ಫಲ ನೀಡಿದಂತೆ ಕಾಣುತ್ತಿಲ್ಲ.  ಮಂಗಳವಾರ ಮತ್ತೊಂದು ಚಿರತೆ ಸಾವನ್ನಪ್ಪಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆ ಮೂಲಕ ಇಲ್ಲಿ ಚಿರತೆಗಳ ಸಾವಿನ ಸಂಖ್ಯೆ 10 ಕ್ಕೇರಿದೆ.

2022 ರಲ್ಲಿ ನಮೀಬಿಯಾ ಚಿರತೆಗಳನ್ನು (Namibian Cheetah) ಭಾರತದಲ್ಲಿ ಮತ್ತೆ ಪರಿಚಯಿಸಲಾಗಿತ್ತು. ಇಂದು ಮೃತಪಟ್ಟ ನಮೀಬಿಯಾದ ಚಿರತೆ ‘ಶೌರ್ಯ’ ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಇಲ್ಲಿಯವರೆಗೆ ರಾಷ್ಟ್ರೀಯ ಉದ್ಯಾನದಲ್ಲಿ ಏಳು ವಯಸ್ಕ ಮತ್ತು ಮೂರು ಚಿರತೆ ಮರಿಗಳು ಸಾವನ್ನಪ್ಪಿವೆ. ಮಧ್ಯಾಹ್ನ 3:17 ರ ಸುಮಾರಿಗೆ ನಮೀಬಿಯಾದ ಶೌರ್ಯ ಹೆಸರಿನ ಚಿರತೆ ಕೊನೆಯುಸಿರೆಳೆದಿದೆ.1952 ರಲ್ಲಿ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿವೆ ಎಂದು ಘೋಷಿಸಲಾಯಿತು. 2022 ರಲ್ಲಿ ಮತ್ತೆ ಈ ತಳಿಯ ಪ್ರಾಣಿಗಳನ್ನು ಉದ್ಯಾನವನಕ್ಕೆ ತರಲಾಯಿತು. ಚೀತಾಗಳನ್ನು ಎರಡು ಬ್ಯಾಚ್‌ಗಳಲ್ಲಿ ಆಮದು ಮಾಡಿಕೊಳ್ಳಲಾಯಿತು. 2022 ರಲ್ಲಿ ನಮೀಬಿಯಾ ಮತ್ತು 2023 ರಲ್ಲಿ ದಕ್ಷಿಣ ಆಫ್ರಿಕಾದಿಂದ ಅವುಗಳನ್ನು ತರಲಾಗಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

7 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

15 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

15 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

17 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

24 hours ago