Advertisement
MIRROR FOCUS

ನಮೀಬಿಯಾದಲ್ಲಿ ಭೀಕರ ಬರಗಾಲ | ಹಸಿವು ನೀಗಿಸಲು ಆನೆ, ಖಡ್ಗಮೃಗ ಸೇರಿದಂತೆ 723 ಕಾಡು ಪ್ರಾಣಿಗಳ ಮಾಂಸ ವಿತರಣೆಗೆ ಸರ್ಕಾರ ನಿರ್ಧಾರ

Share

ಹಸಿವು ಏನು ಬೇಕಾದರು ಮಾಡಿಸುತ್ತದೆ. ಜಾತಿ, ಬೇಧ, ಮೇಲು-ಕೀಳು, ಪ್ರಾಣಿ-ಪಕ್ಷಿ ಯಾವುದಾದರೂ ಸರಿ.. ಈಗ  ನಮೀಬಿಯಾ ಕತೆ ಕೇಳಿ.. ಅದು  ಹೇಳಿ ಕೇಳಿ ಬಡ ದೇಶ. ಯಾವಾಗಲೂ ಆಹಾರದ ಕೊರತೆ ಅಲ್ಲಿನ ಜನರನ್ನು ಹೈರಣಾಗಿಸುತ್ತಲೇ ಇರುತ್ತದೆ. ಆಹಾರಕ್ಕಾಗಿ ಸಂಘರ್ಷಗಳು ನಡೆಯುತ್ತಲೇ ಇದೆ.  ಈ ಬಾರಿಯ ಬರಗಾಲ ಇಡೀ ನಮೀಬಿಯಾವನ್ನು  ಹೈರಾಣಾಗಿಸಿದೆ.  ಹಸಿವಿನ ಸಂಕಷ್ಟ ಕಾಣಲು ಶುರುವಾಗಿದೆ. ಹೀಗಾಗಿ ನಮೀಬಿಯಾದಲ್ಲಿ  ಸರ್ಕಾರವೇ ಕಾಡುಪ್ರಾಣಿಗಳನ್ನು  ಕೊಲ್ಲಲು ಆದೇಶಿಸಿದೆ. 

ಬರದಿಂದ  ತತ್ತರಿಸಿರುವ ನಮೀಬಿಯಾ ಜನರಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ 83 ಆನೆಗಳು (Elephants) ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಲ್ಲುವ ಯೋಜನೆಯನ್ನು ರೂಪಿಸಿದೆ. ತೀವ್ರ ಬರಗಾಲದಿಂದ ಆಹಾರಕ್ಕಾಗಿ ಹೆಣಗಾಡುತ್ತಿರುವವರಿಗೆ ಮಾಂಸವನ್ನು ವಿತರಿಸುವುದಾಗಿ ಸರ್ಕಾರ ಹೇಳಿದೆ.83 ಆನೆಗಳು, 30 ಹಿಪ್ಪೋಗಳು, 60 ಎಮ್ಮೆಗಳು, 50 ಇಂಪಾಲಾ, 100 ನೀಲಿ ಕಾಡಾನೆಗಳು ಮತ್ತು 300 ಜೀಬ್ರಾಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ ಎಂದು ದೇಶದ ಪರಿಸರ, ಅರಣ್ಯ ಮತ್ತು ಪ್ರವಾಸೋದ್ಯಮ ಸಚಿವಾಲಯ ಸೋಮವಾರ ಪ್ರಕಟಿಸಿದೆ.

ವೃತ್ತಿಪರ ಬೇಟೆಗಾರರು ಮತ್ತು ಸರ್ಕಾರದಿಂದ ಗುತ್ತಿಗೆ ಪಡೆದ ಕಂಪನಿಗಳು ಈಗಾಗಲೇ 157 ಪ್ರಾಣಿಗಳನ್ನು ಬೇಟೆಯಾಡಿ, 56,800 ಕೆಜಿ  ಮಾಂಸವನ್ನು ಜನರಿಗೆ ನೀಡಲಾಗಿದೆ. ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ನಾಗರಿಕರ ಅನುಕೂಲಕ್ಕಾಗಿ ಬಳಸಲು ನಮಗೆ ಸಂವಿಧಾನದಲ್ಲಿ ಅನುಮತಿ ಇದೆ ಎಂದು ನಮೀಬಿಯಾ ಸರ್ಕಾರ ಕಾಡು ಪ್ರಾಣಿಗಳ ಭೇಟೆಯಾಡುವ ಕ್ರಮವನ್ನು ಸಮರ್ಥಿಸಿಕೊಂಡಿದೆ.

ದಕ್ಷಿಣ ಆಫ್ರಿಕಾವು ಪ್ರಸ್ತುತ ದಶಕಗಳಲ್ಲಿ ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದೆ. ವಿಶ್ವಸಂಸ್ಥೆಯು ವರದಿ ಮಾಡಿದಂತೆ ಜುಲೈನಲ್ಲಿ ನಮೀಬಿಯಾ ಸಂಗ್ರಹಿಸಿಟ್ಟಿದ್ದ ಮೀಸಲು ಆಹಾರದಲ್ಲಿ 84% ರಷ್ಟು ಆಹಾರ ಖಾಲಿಯಾಗಿದೆ. ನಮೀಬಿಯಾದ ಜನಸಂಖ್ಯೆಯ ಅರ್ಧದಷ್ಟು ಜನರು ಮುಂಬರುವ ತಿಂಗಳುಗಳಲ್ಲಿ ಭಾರೀ ಆಹಾರದ ಸಮಸ್ಯೆ ಎದುರಿಸಬಹುದು. ಪರಿಸರ ಸಚಿವಾಲಯವು ಕೂಡಲೇ ಮಧ್ಯಪ್ರವೇಶಿಸದಿದ್ದರೆ ಭೀಕರ ಬರಗಾಲವು ಮಾನವ-ವನ್ಯಜೀವಿ ಸಂಘರ್ಷವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಿತ್ತು. ಜಿಂಬಾಬ್ವೆ, ಜಾಂಬಿಯಾ, ಬೋಟ್ಸ್ವಾನಾ, ಅಂಗೋಲಾ ಮತ್ತು ನಮೀಬಿಯಾದಲ್ಲಿ ಅಂದಾಜು 2 ಲಕ್ಷ ಆನೆಗಳು ಇದ್ದು, ವಿಶ್ವದಲ್ಲೇ ಅತಿ ಹೆಚ್ಚು ಪ್ರಮಾಣದ ಆನೆಗಳು ಇಲ್ಲಿ ನೆಲೆಸಿವೆ. ಕಳೆದ ವರ್ಷ ಬೋಟ್ಸ್ವಾನಾ ಮತ್ತು ಜಿಂಬಾಬ್ವೆಯಲ್ಲಿ ನೂರಾರು ಆನೆಗಳು ಬರಗಾಲದಿಂದ ಸಾವನ್ನಪ್ಪಿದ್ದವು.

2022 ರಿಂದ ನಮೀಬಿಯಾದ ಒಮಾಹೆಕೆ ಪ್ರದೇಶದಲ್ಲಿ ಸುಮಾರು 800 ಜನರು ಅಪೌಷ್ಟಿಕತೆಯಿಂದ ಸಾವನ್ನಪ್ಪಿದ್ದಾರೆ ಎಂದು ನಮೀಬಿಯನ್ ಕಳೆದ ವಾರ ವರದಿ ಮಾಡಿದೆ. ಅದೇ ಎರಡು ವರ್ಷಗಳ ಅವಧಿಯಲ್ಲಿ ಈ ಪ್ರದೇಶವು 30 219 ಅಪೌಷ್ಟಿಕತೆ ಪ್ರಕರಣಗಳನ್ನು ದಾಖಲಿಸಿದೆ ಎಂದು ವರದಿಯಾಗಿದೆ.

ಈ ನಡುವೆ ನಮೀಬಿಯಾ ಅಧ್ಯಕ್ಷ ನಂಗೊಲೊ  ಅಪೌಷ್ಟಿಕತೆ-ಸಂಬಂಧಿತ ಸಾವುಗಳ ಇತ್ತೀಚಿನ ವರದಿಗಳು ಆತಂಕಕಾರಿ ಎಂದಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

10 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

12 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

18 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

19 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago