ಸಾರ್ವಜನಿಕ- ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ ನಂದಿ ಬೆಟ್ಟದಲ್ಲಿ ರೂ 93.40 ಕೋಟಿ ರೋಪ್‌ವೇ ಯೋಜನೆಗೆ ಕರ್ನಾಟಕ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಬೆಂಗಳೂರಿನ ಜನರಿಗೆ ವಾರಾಂತ್ಯದ ವಿಹಾರ ತಾಣವಾದ ನಂದಿಬೆಟ್ಟಗಳು ಪ್ರವಾಸೋದ್ಯಮ ಕೇಂದ್ರವಾಗಿ ಮಾರ್ಪಟ್ಟಿದೆ.
ರೋಪ್‌ವೇ 2.93 ಕಿಮೀ ಉದ್ದವಿದ್ದು, 18 ಗೋಪುರಗಳನ್ನು ಹೊಂದಿರುತ್ತದೆ ಮತ್ತು ಪ್ರತಿ ಸುತ್ತು- ಪ್ರವಾಸವು ಸುಮಾರು 28 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಕ್ಯಾಬಿನೆಟ್ 50 ಕ್ಯಾಬಿನ್‌ಗಳನ್ನು ಅನುಮೋದಿಸಿದೆ, ಪ್ರತಿಯೊಂದು 10 ಪ್ರಯಾಣಿಕರಿಗೆ ಅವಕಾಶ ಕಲ್ಪಿಸುತ್ತದೆ.
ದೀರ್ಘಕಾಲದಿಂದ ಬಾಕಿ ಉಳಿದಿರುವ ರೋಪ್‌ವೇ ಯೋಜನೆ ಶೀಘ್ರದಲ್ಲಿಯೇ ನನಸಾಗಲಿದೆ ಎಂದು ನನಗೆ ತುಂಬಾ ಸಂತೋಷವಾಗುತ್ತಿದೆ. ನಂದಿ ಬೆಟ್ಟ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಲಿದ್ದು, ಚಿಕ್ಕಬಳ್ಳಾಪುರದ ಅಭಿವೃದ್ದಿಯಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ. ಆದರೆ ಅರಣ್ಯದಲ್ಲಿ ಪಿಲ್ಲರ್ ನಿರ್ಮಾಣಕ್ಕೆ ಅನುಮೋದನೆ ನೀಡಲು ಅರಣ್ಯ ಇಲಾಖೆ ಉತ್ಸುಕವಾಗಿಲ್ಲ ಏಕೆಂದರೆ ಪ್ರದೇಶದ ಪರಿಸರ ವ್ಯವಸ್ಥೆಗೆ ಅಡ್ಡಿಯಾಗಬಹುದು ಎನ್ನುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಹಾಗೂ ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್ ಹೇಳಿದರು.
ಮೂಲಗಳ ಪ್ರಕಾರ 3,000-4,000 ಕ್ಕೂ ಹೆಚ್ಚು ಕಾರುಗಳು ಪ್ರವಾಸಿ ತಾಣಕ್ಕೆ ಭೇಟ ನೀಡುವುದರಿಂದ ನಂದಿ ಬೆಟ್ಟಗಳಲ್ಲಿ ವಾಹನ ಸಾಂದ್ರತೆಯು ಆತಂಕಕಾರಿಯಾಗಿದೆ. ನಂದಿ ಬೆಟ್ಟಗಳು ವಾರದ ದಿನಗಳಲ್ಲಿ ಸುಮಾರು 3,000 ಮತ್ತು ವಾರಾಂತ್ಯದಲ್ಲಿ 8,000 ಜನರ ಕಾಲ್ನಡಿಗೆಗೆ ಸಾಕ್ಷಿಯಾಗಿದೆ. ಮಾತ್ರವಲ್ಲ ಕೋವಿಡ್ -19 ನಿರ್ಬಂಧಗಳನ್ನು ಸಡಿಲಿಸಿದ ನಂತರ ಕೆಲವು ವಾರಾಂತ್ಯಗಳಲ್ಲಿ 10,000 ಕ್ಕೂ ಹೆಚ್ಚು ಜನರು ಬೆಟ್ಟಗಳಿಗೆ ಭೇಟಿ ನೀಡುವುದನ್ನು ನೋಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…