ಗ್ರಾಹಕರಿಗೆ ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಬಿಸಿ ತಟ್ಟಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಹಾಲು ಒಕ್ಕೂಟ ಮತ್ತು ರೈತ ಸಂಘಟನೆಗಳ ಬೇಡಿಕೆಯನ್ನು ಪರಿಗಣಿಸಿ ಬೆಲೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ನಂದಿನಿಯ ಎಲ್ಲಾ ಬ್ರ್ಯಾಂಡ್ ಹಾಲಿನ ಜೊತೆಗೆ ಮೊಸರಿನ ದರವು ಒಂದು ಲೀಟರ್‌ಗೆ 4 ರೂಪಾಯಿ ಏರಿಕೆಯಾಗಿದೆ. ಏಪ್ರಿಲ್ 1 ರಿಂದ ಹೊಸ ದರ ಅನ್ವಯವಾಗಲಿದೆ. ದರ ಪರಿಷ್ಕರಣೆಯ ಮೊತ್ತವು ರಾಜ್ಯದ ಹಾಲು ಉತ್ಪಾದಕರಿಗೆ ನೇರವಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ. ಸರ್ಕಾರ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ದರ ಏರಿಕೆ ಮಾಡಿದೆ. ಫೆಬ್ರವರಿಯಲ್ಲಿ ಪ್ರತಿ ಲೀಟರ್ಗೆ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಲೀಟರ್ಗೆ 4 ರೂಪಾಯಿ ಏರಿಕೆ ಮಾಡಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel