ನಂದಿನಿ ಹಾಲು, ಮೊಸರು ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ | ಏಪ್ರಿಲ್ 1 ರಿಂದ ಹೊಸ ದರ ಅನ್ವಯ

March 27, 2025
10:58 PM
ನಂದಿನಿಯ ಎಲ್ಲಾ ಬ್ರ್ಯಾಂಡ್ ಹಾಲಿನ ಜೊತೆಗೆ ಮೊಸರಿನ ದರವು ಒಂದು ಲೀಟರ್‌ಗೆ 4 ರೂಪಾಯಿ ಏರಿಕೆಯಾಗಿದೆ. ಏಪ್ರಿಲ್ 1 ರಿಂದ ಹೊಸ ದರ ಅನ್ವಯವಾಗಲಿದೆ. 

ಗ್ರಾಹಕರಿಗೆ ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಬಿಸಿ ತಟ್ಟಿದೆ.  ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ನಡೆದ  ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಹಾಲು ಒಕ್ಕೂಟ ಮತ್ತು ರೈತ ಸಂಘಟನೆಗಳ ಬೇಡಿಕೆಯನ್ನು ಪರಿಗಣಿಸಿ ಬೆಲೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಲಾಗಿದೆ.  ನಂದಿನಿಯ ಎಲ್ಲಾ ಬ್ರ್ಯಾಂಡ್ ಹಾಲಿನ ಜೊತೆಗೆ ಮೊಸರಿನ ದರವು ಒಂದು ಲೀಟರ್‌ಗೆ 4 ರೂಪಾಯಿ ಏರಿಕೆಯಾಗಿದೆ. ಏಪ್ರಿಲ್ 1 ರಿಂದ ಹೊಸ ದರ ಅನ್ವಯವಾಗಲಿದೆ.  ದರ ಪರಿಷ್ಕರಣೆಯ ಮೊತ್ತವು ರಾಜ್ಯದ ಹಾಲು ಉತ್ಪಾದಕರಿಗೆ ನೇರವಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.  ಸರ್ಕಾರ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ದರ ಏರಿಕೆ ಮಾಡಿದೆ. ಫೆಬ್ರವರಿಯಲ್ಲಿ ಪ್ರತಿ ಲೀಟರ್ಗೆ  2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಲೀಟರ್ಗೆ  4 ರೂಪಾಯಿ ಏರಿಕೆ ಮಾಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror