ನಂದಿನಿ ಹಾಲಿನ ದರ ಹೆಚ್ಚಳ | ಪ್ಯಾಕೇಟ್‌ನಲ್ಲಿ 50 ಎಂಎಲ್ ಹೆಚ್ಚುವರಿ ಹಾಲು |

June 25, 2024
12:30 PM

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದೆ (Nandini Milk Price Hike). ಪ್ರತಿ ಲೀಟರ್‌ ಹಾಲಿನ ದರ 2.10 ರೂ. ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿಂದು(Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದ್ರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಹಾಲು ಮಂಡಳಿ ಹಾಲು ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನ.  98,17, 000  ಲೀ ಒಟ್ಟು ಹಾಲು ಸಂಗ್ರಹ ಆಗ್ತಿದೆ. ಸದ್ಯದಲ್ಲಿ ಒಂದು ಕೋಟಿ ಸಂಗ್ರಹ ಗುರಿ ಮುಟ್ಟಲಿದೆ. ಇದು ದಾಖಲೆ. ರಾಜ್ಯದ 27 ಲಕ್ಷ ಹಾಲು ಉತ್ಪಾದಕರು ಇದಕ್ಕೆ ಕಾರಣ. ಸದ್ಯದ ಶೇಖರಣೆಯಲ್ಲಿ 30 ಲಕ್ಷ ಪೌಡರ್ ಗೆ ಕಳುಹಿಸುತ್ತಿದ್ದೇವೆ. ಇದರಲ್ಲಿ ನಮ್ಮ ಬಂಡವಾಳ ಸ್ವಲ್ಪ ಡೆಡ್ ಆಗ್ತಿದೆ. 27 ಲಕ್ಷ ಹಾಲು ಉತ್ಪಾದಕ ರು ಗ್ರಾಹಕರಿಗೆ ತೊಂದರೆಯಾಗಬಾರದು. ಇಬ್ಬರು ಕೂಡ ನಮಗೆ ಎರಡು ಕಣ್ಣುಗಳು ಇದ್ದ ಹಾಗೆ ಎಂದು ಅಧ್ಯಕ್ಷರು ಹೇಳಿದರು.

ಲೀಟರ್ ಗೆ ಸದ್ಯ ಗ್ರಾಹಕರಿಗೆ 42 ರೂ ಇದೆ. ಪ್ರತೀ ಹಾಲಿನ ಪ್ಯಾಕೆಟ್ ನಲ್ಲು 50ml ಜಾಸ್ತಿ ಹಾಲು ಇರಲಿದೆ. ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲು 550 ml ಇರಲಿದೆ. ನಾಳೆಯಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಸಾವಿರ ಎಂಎಲ್ ಬರ್ತಿದ್ದ ಹಾಲು ಇನ್ಮೇಲೆ ಸಾವಿರದ ಐವತ್ತು ಎಂಎಲ್ ಗೆ ಏರಿಕೆಯಾಗಿದೆ. ಇಷ್ಟು ದಿನ ಅರ್ಧ ಲೀ ಪ್ಯಾಕೇಟ್ ನಲ್ಲಿ500 ಎಂಎಲ್ ಇರ್ತಿತ್ತು. ಇನ್ಮುಂದೆ 50 ಎಂಎಲ್ ಹಾಲು‌ ಹೆಚ್ಚುವರಿಯಾಗಿ ಪ್ಯಾಕೇಟ್ ನಲ್ಲಿ ಸಿಗಲಿದೆ. ಹಾಗಾಗಿ ಹೆಚ್ಚುವರಿ ಹಾಲಿಗೆ 2  ರೂ ಹೆಚ್ಚಳ ಮಾಡುತ್ತಿದ್ದೇವೆ.  ಹಾಲು ಹೆಚ್ಚಳ ಮಾಡಿದ್ದಕ್ಕೆ 2ರೂ ದರ ಏರಿಕೆ ಎಂದು ಅವರು ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror