ನಂದಿನಿ ಹಾಲಿನ ದರ 2 ರೂಪಾಯಿ ಇಳಿಕೆ | 50 ಎಲ್ ಹೆಚ್ಚುವರಿ ಹಾಲು ಕಡಿತ | ನಂದಿನಿಯಿಂದ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ

December 27, 2024
11:13 AM
ನಂದಿನಿ ಹಾಲಿನ ದರ 2 ರೂಪಾಯಿ ಇಳಿಕೆಗೆ ನಿರ್ಧಾರ.

ಕೆಎಂಎಫ್‌ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್‌ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಘೋಷಿಸಿದ್ದಾರೆ.…..ಮುಂದೆ ಓದಿ….

Advertisement
Advertisement

ಬೆಂಗಳೂರಿನಲ್ಲಿ ಮಾತನಾಡಿದ ಅವರು, 50 ಎಂ.ಎಲ್. ಹೆಚ್ಚುವರಿ ಹಾಲು ವಾಪಸ್ಸಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಇತರೆಡೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಟ್ಟಿಗೆ ಹೆಚ್ಚುವರಿಯಾಗಿ ಪ್ರೋಟಿನ್ ಸೇರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ – ಕೆಎಂಎಫ್‌ನ ನಂದಿನಿ ವತಿಯಿಂದ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ ಮಾಡಲಾಗಿದೆ. ನಂದಿನಿ ವೇ ಪ್ರೋಟಿನ್ ಆಧಾರಿತ ಈ ಉತ್ಪನ್ನಗಳನ್ನು ನಂದಿನಿ ಇದೇ ಮೊದಲ ಬಾರಿಗೆ ಉತ್ಪಾದಿಸಿ ಮಾರಾಟ ಮಾಡುತ್ತಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ನಂದಿನಿ ಬ್ರಾಂಡ್‌ನ ಇಡ್ಲಿ ದೋಸೆ ಹಿಟ್ಟು ಎರಡು ವಿಧದ ಪ್ಯಾಕ್‌ಗಳಲ್ಲಿ ಲಭ್ಯವಿರುತ್ತದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |
May 22, 2025
2:37 PM
by: ಸಾಯಿಶೇಖರ್ ಕರಿಕಳ
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು
May 22, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group