ಕೆಎಂಎಫ್‌ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್‌ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಘೋಷಿಸಿದ್ದಾರೆ.…..ಮುಂದೆ ಓದಿ….
ಬೆಂಗಳೂರಿನಲ್ಲಿ ಮಾತನಾಡಿದ ಅವರು, 50 ಎಂ.ಎಲ್. ಹೆಚ್ಚುವರಿ ಹಾಲು ವಾಪಸ್ಸಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಇತರೆಡೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಟ್ಟಿಗೆ ಹೆಚ್ಚುವರಿಯಾಗಿ ಪ್ರೋಟಿನ್ ಸೇರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ – ಕೆಎಂಎಫ್‌ನ ನಂದಿನಿ ವತಿಯಿಂದ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ ಮಾಡಲಾಗಿದೆ. ನಂದಿನಿ ವೇ ಪ್ರೋಟಿನ್ ಆಧಾರಿತ ಈ ಉತ್ಪನ್ನಗಳನ್ನು ನಂದಿನಿ ಇದೇ ಮೊದಲ ಬಾರಿಗೆ ಉತ್ಪಾದಿಸಿ ಮಾರಾಟ ಮಾಡುತ್ತಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ನಂದಿನಿ ಬ್ರಾಂಡ್‌ನ ಇಡ್ಲಿ ದೋಸೆ ಹಿಟ್ಟು ಎರಡು ವಿಧದ ಪ್ಯಾಕ್‌ಗಳಲ್ಲಿ ಲಭ್ಯವಿರುತ್ತದೆ.
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…