Advertisement
MIRROR FOCUS

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

Share

ನಂದಿನಿ ಹಾಲು ಮತ್ತು ಹಾಲು ಉತ್ಪನ್ನಗಳು ಸೇವನೆಗೆ ಅಸುರಕ್ಷಿತವೆಂದು ಬಿಂಬಿಸುವ ಹಾಗೂ ಕೆಲವು ನಂದಿನಿ ಉತ್ಪನ್ನಗಳ ವಿರುದ್ಧ ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ (KMF) ಸ್ಪಷ್ಟಪಡಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿರುವ ಕೆಎಂಎಫ್, ಬಾಲ್ಯದಿಂದಲೇ ನಂದಿನಿ ಬ್ರಾಂಡ್ ನೊಂದಿಗೆ ಬೆಳೆದ ಕೋಟ್ಯಂತರ ಗ್ರಾಹಕರಲ್ಲಿ ಇಂತಹ ಸುಳ್ಳು ಮಾಹಿತಿ ಅನಗತ್ಯ ಭೀತಿ ಮತ್ತು ಗೊಂದಲವನ್ನು ಉಂಟುಮಾಡುತ್ತಿದೆ ಎಂದು ತಿಳಿಸಿದೆ.

ಗ್ರಾಹಕರು ಯಾವುದೇ ಆಧಾರವಿಲ್ಲದ ವದಂತಿಗಳು ಹಾಗೂ ಸುಳ್ಳು ಆರೋಪಗಳಿಂದ ಗೊಂದಲಕ್ಕೀಡಾಗಬಾರದು ಎಂದು ಮನವಿ ಮಾಡಿರುವ ಸಂಸ್ಥೆಯು, ನಂದಿನಿ ಹಾಲು ಹಾಗೂ ಎಲ್ಲಾ ಹಾಲು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವಾಗಿವೆ ಎಂದು ಭರವಸೆ ನೀಡಿದೆ.

ಕೆಎಂಎಫ್ ತನ್ನ ಎಲ್ಲಾ ಉತ್ಪನ್ನಗಳ ಉತ್ಪಾದನೆ, ಸಂಸ್ಕರಣೆ ಮತ್ತು ವಿತರಣೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನಿಗದಿಪಡಿಸಿದ ಕಟ್ಟುನಿಟ್ಟಿನ ಮಾನದಂಡಗಳನ್ನು ಸಂಪೂರ್ಣವಾಗಿ ಪಾಲಿಸುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಇದರೊಂದಿಗೆ, ಗ್ರಾಹಕರು ಅಧಿಕೃತ ಮೂಲಗಳಿಂದ ಮಾತ್ರ ಮಾಹಿತಿ ಪಡೆಯಬೇಕು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಕೆಎಂಎಫ್ ವಿನಂತಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka Milk Federation (KMF) has clarified that Nandini milk and dairy products are completely safe for consumption. The organization urged consumers not to believe false rumors circulating on social media and assured that all products strictly follow FSSAI safety and quality standards.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

2 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

2 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

13 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

18 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

18 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

19 hours ago