Opinion

ಹಾಲಿನ ಪ್ಯಾಕೆಟ್‌ ಬಣ್ಣ | ಸರಿಯಾದ ಬಣ್ಣದ ಪ್ಯಾಕೆಟ್ ಆರಿಸಿಕೊಳ್ಳುವುದರ ಹಿಂದಿನ ರಹಸ್ಯ ಏನು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕದ(Karnataka) ನಂದಿನಿ ಹಾಲು (Nandini Milk Organization) ವೆರೈಟಿ ಹಾಲಿನ ಪ್ಯಾಕೆಟ್ ಗಳನ್ನ(Milk Packet) ಮಾಡಿದೆ. ಅದು ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು(Green), ಹಳದಿ(Yellow), ಕೇಸರಿ(Orange), ನೀಲಿ(Blue) ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್‌ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೆ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ! ಆದರೆ ನಂದಿನಿ ಹಾಲನ್ನು(Nandini Milk) ಸರಿಯಾಗಿ ಬಳಸಬೇಕು, ಅದರಿಂದ ಆದಷ್ಟು ಹೆಚ್ಚು ಉಪಯೋಗ ಪಡೆಯಬಹುದು.

1. ಕಾಯಿಸದೆ ಕುಡಿಯಲು: ಬೆಳಗ್ಗೆ ಎದ್ದು ಹಾಲು ಕಾಯಿಸಿ ಕುಡಿಯಕ್ಕೆ ಟೈಮ್ ಇಲ್ವಾ? ಹಾಗಾದರೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ತೊಗೊಂಡು ಹಾಗೆಯೇ ಕುಡಿಬೋದು. ಯಾಕೆ ಗೊತ್ತಾ? ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.

2. ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು.

3. ಕಾಫಿ ಅಥವಾ ಟೀ ಮಾಡಕ್ಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಿದರೆ ಹಾಲು ಒದಗುತ್ತದೆ. ಹೆಚ್ಚು ಲೋಟ ಕಾಫಿ/ಟೀ ಮಾಡಬಹುದು. ರುಚಿಯೂ ಚೆನ್ನ.

4. ಗಟ್ಟಿ ಕಾಫಿ ಮಾಡಕ್ಕೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದು ಗಟ್ಟಿ ಕಾಫಿ ಮಾಡಿಕೊಳ್ಳಬಹುದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.

Advertisement

5. ಗಟ್ಟಿ ಮೊಸರು ಮಾಡಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

6. ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. “ಮಿಲ್ಕ್ ಮೈಡ್” ತರುವ ಬದಲು.

7. ಪುಟ್ಟ ಮಕ್ಕಳಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

8. ಹಿರಿಯರಿಗೆ: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿಮ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ. ಇದಲ್ಲದೆ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.

9. ಕೊಬ್ಬು ಇಳಿಸಕ್ಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.

Advertisement

10. ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್.. ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.

11. ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

12. ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನಂದಿನಿ ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

13. ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.

ಬರಹ :
ಶಂಕರಯ್ಯ ಚಿಕ್ಕಮಠ್‌

(ಪೇಸ್‌ಬುಕ್‌ ವಾಲ್‌ನಿಂದ)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶರಾವತಿ ಯೋಜನೆ | ಜೀವವೈವಿಧ್ಯಕ್ಕೆ ಆಪತ್ತು- ಮನುಕುಲಕ್ಕೆ ವಿಪತ್ತು

ಶರಾವತಿ ಯೋಜನೆಯ ಬಗ್ಗೆ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಯ ಬರೆದ ಬರಹ...

2 hours ago

ಮೂಲ ಮರೆತವರು ಅಸ್ತಿತ್ವ ಕಳೆದಕೊಳ್ಳುತ್ತಾರೆ : ರಾಘವೇಶ್ವರ ಶ್ರೀ

ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ…

2 hours ago

ಕಲಬುರ್ಗಿಯಲ್ಲಿ ಧಾರಾಕಾರ ಮಳೆ | ವಿವಿದೆಡೆ ಜನಜೀವನ ಅಸ್ತವ್ಯಸ್ಥ | ಮತ್ತೆ ಮಳೆಯಬ್ಬರ

ಕಲಬುರ್ಗಿಯಲ್ಲಿ  ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ…

5 hours ago

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು | ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ನಗರ ಪರ್ಯಟನೆ

ಬೆಂಗಳೂರು ನಗರದಲ್ಲಿ  ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಬೆಂಗಳೂರು ಪೊಲೀಸರು  ವಿಶೇಷ ಕಾರ್ಯಾಚರಣೆ …

5 hours ago

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…

18 hours ago

ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ

ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…

1 day ago