ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು(Milk and Milk Products) ಇನ್ನು ಬಡವರು ಹಾಗೂ ಮಧ್ಯಮ ವರ್ಗದ(Low and Middle class) ಕುಟುಂಬಗಳು(Family) ಕೇವಲ ಕೇಳಬೇಕಷ್ಟೆ…! ದಿನದಿಂದ ದಿನಕ್ಕೆ ಹಾಲಿನ ಬೆಲೆ(milk price hike) ಏರುತ್ತಲೇ ಇದೆ. ಹೊಸ ವರ್ಷಕ್ಕೆ(New year) ನಂದಿನಿ ಹಾಲು, ಮೊಸರು (Nandini Milk, Curd) ದರ ಹೆಚ್ಚಾಗುವ ಸಾಧ್ಯತೆಯಿದೆ. ಈ ಸಂಬಂಧ ಅಧಿವೇಶನದಲ್ಲಿ (Belagavi Session) ಸರ್ಕಾರ ದರ ಏರಿಸುವ ಸುಳಿವು ನೀಡಿದೆ. ಹಾಲಿನ ದರ ಏರಿಕೆ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಸರ್ಕಾರ (Karnataka Government) ಹೇಳಿದೆ.
ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ ವೈ ನಂಜೇಗೌಡ ಪ್ರಶ್ನೆಗೆ ಪಶು ಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದ್ದಾರೆ. ಇತರೇ ಖಾಸಗಿ ಬ್ರ್ಯಾಂಡ್‌ಗಳ ದರಕ್ಕಿಂತ ನಂದಿನಿ ಬ್ರ್ಯಾಂಡ್‌ಗಳ ದರ 10-12 ರೂ. ಕಡಿಮೆ ಇದೆ. ಹಾಲು ಉತ್ಪಾದಕರು, ಒಕ್ಕೂಟಗಳು ನಷ್ಟದಲ್ಲಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಿಸುವುದಾಗಿ ಉತ್ತರ ಕೊಟ್ಟಿದ್ದಾರೆ. ಒಂದು ವೇಳೆ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಂಡರೆ ನಾಲ್ಕೇ ತಿಂಗಳ ಒಳಗಡೆ ಮತ್ತೊಮ್ಮೆ ಹಾಲಿನ ದರ ಏರಿಕೆಯಾಗಲಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಈಗಾಗಲೇ ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.
ಬೆಲೆ ಏರಿಕೆ ಯಾಕೆ? : ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ. ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.
– ಅಂತರ್ಜಾಲ ಮಾಹಿತಿ
The price of Nandini Milk, Curd is likely to increase for the New Year. In this regard, the government has hinted to increase the rate in the session (Belagavi Session). The Government (Karnataka Government) has said that the milk price hike proposal is under review. Animal Husbandry Minister K Venkatesh has answered Malur MLA KY Nanjegowda’s question about price hike.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…