Advertisement
MIRROR FOCUS

ಮತ್ತೆ ಹೊಸ ವರ್ಷಕ್ಕೆ ನಂದಿನಿ ಹಾಲು, ಮೊಸರು ದರ ಏರಿಕೆ ಸಾಧ್ಯತೆ | ಸರ್ಕಾರದಿಂದ ಸುಳಿವು

Share

ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು(Milk and Milk Products) ಇನ್ನು ಬಡವರು ಹಾಗೂ ಮಧ್ಯಮ ವರ್ಗದ(Low and Middle class) ಕುಟುಂಬಗಳು(Family) ಕೇವಲ ಕೇಳಬೇಕಷ್ಟೆ…! ದಿನದಿಂದ ದಿನಕ್ಕೆ ಹಾಲಿನ ಬೆಲೆ(milk price hike) ಏರುತ್ತಲೇ ಇದೆ. ಹೊಸ ವರ್ಷಕ್ಕೆ(New year) ನಂದಿನಿ ಹಾಲು, ಮೊಸರು (Nandini Milk, Curd) ದರ ಹೆಚ್ಚಾಗುವ ಸಾಧ್ಯತೆಯಿದೆ. ಈ ಸಂಬಂಧ ಅಧಿವೇಶನದಲ್ಲಿ (Belagavi Session) ಸರ್ಕಾರ ದರ ಏರಿಸುವ ಸುಳಿವು ನೀಡಿದೆ. ಹಾಲಿನ ದರ ಏರಿಕೆ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಸರ್ಕಾರ (Karnataka Government) ಹೇಳಿದೆ.

ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ ವೈ ನಂಜೇಗೌಡ ಪ್ರಶ್ನೆಗೆ ಪಶು ಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದ್ದಾರೆ. ಇತರೇ ಖಾಸಗಿ ಬ್ರ್ಯಾಂಡ್‌ಗಳ ದರಕ್ಕಿಂತ ನಂದಿನಿ ಬ್ರ್ಯಾಂಡ್‌ಗಳ ದರ 10-12 ರೂ. ಕಡಿಮೆ ಇದೆ. ಹಾಲು ಉತ್ಪಾದಕರು, ಒಕ್ಕೂಟಗಳು ನಷ್ಟದಲ್ಲಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಿಸುವುದಾಗಿ ಉತ್ತರ ಕೊಟ್ಟಿದ್ದಾರೆ. ಒಂದು ವೇಳೆ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಂಡರೆ ನಾಲ್ಕೇ ತಿಂಗಳ ಒಳಗಡೆ ಮತ್ತೊಮ್ಮೆ ಹಾಲಿನ ದರ ಏರಿಕೆಯಾಗಲಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಈಗಾಗಲೇ ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.

ಬೆಲೆ ಏರಿಕೆ ಯಾಕೆ? : ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ. ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.

– ಅಂತರ್ಜಾಲ ಮಾಹಿತಿ

The price of Nandini Milk, Curd is likely to increase for the New Year. In this regard, the government has hinted to increase the rate in the session (Belagavi Session). The Government (Karnataka Government) has said that the milk price hike proposal is under review. Animal Husbandry Minister K Venkatesh has answered Malur MLA KY Nanjegowda’s question about price hike.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

18 minutes ago

ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ…

4 hours ago

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ

‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…

12 hours ago

ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?

ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್‌ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…

15 hours ago

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!

ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…

21 hours ago