ಸುದ್ದಿಗಳು

ರಾಜ್ಯದಲ್ಲಿ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಒಂದು ತಿಂಗಳು ಗ್ರಾಹಕ ಸ್ನೇಹಿಯಾಗಿ ನಂದಿನಿ ಸಿಹಿ ಉತ್ಸವವನ್ನು ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಆಚರಣೆ ಮಾಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಹೇಳಿದರು.

Advertisement

ಅವರು ಡಿ.19ರ ಸೋಮವಾರ ಮಂಗಳೂರು ನಗರದ ರಥಬೀದಿಯಲ್ಲಿರುವ ಸುಪ್ರಿಯಾ ಫ್ರಾಂಚೈಸಿಯಲ್ಲಿ ಕರ್ನಾಟಕ ಹಾಲು ಮಹಾಮಂಡಳಿ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.  ಸಿಹಿ ಉತ್ಸವದ ಅಂಗವಾಗಿ ಪ್ರತಿ ನಂದಿನಿ ಸಿಹಿ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹಾಲು ಒಕ್ಕೂಟದ ರೈತರ ಸೇವೆಯೊಂದಿಗೆ ಗ್ರಾಹಕರ ಸಂತೃಪ್ತಿ, ಕಾರ್ಮಿಕ ಕಲ್ಯಾಣದ ಉದ್ದೇಶ ಹೊಂದಿರುವ ಸಂಸ್ಥೆಯಾಗಿದೆ. ನಂದಿನಿ ಸಿಹಿ ಉತ್ಸವ ಮೂಲಕ ಮತ್ತಷ್ಟು ಗ್ರಾಹಕ ಸ್ನೇಹಿಯಾಗಿದ್ದು, ಈ ಮೂಲಕ ಹೈನುಗಾರರಿಗೂ ಪ್ರೋತ್ಸಾಹ ಸಿಗಲಿದೆ ಎಂದರು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ. ಅಶೋಕ್ ಅವರು ಮಾತನಾಡಿ, ಕ್ರಿಸ್‍ಮಸ್, ಮಕರ ಸಂಕ್ರಾಂತಿ, ಹೊಸ ವರ್ಷಾಚರಣೆಗಳು ಬರುತ್ತಿದ್ದು, ಈ ಸಂಭ್ರಮವನ್ನು ನಂದಿನಿ ಸಿಹಿ ಉತ್ಸವದೊಂದಿಗೆ ಆಚರಿಸೋಣ ಎಂದರು. ನಂದಿನಿ ಹಾಲಿನೊಂದಿಗೆ 59 ಬಗೆಯ ಸಹ ಉತ್ಪನ್ನಗಳಿದ್ದು, ಇವುಗಳಲ್ಲಿ ನಂದಿನಿ ಸಿಹಿ ಉತ್ಪನ್ನಗಳು ರಿಯಾಯಿತಿ ದರದಲ್ಲಿ ಮಾರಾಟ ಮಳಿಗೆಯಲ್ಲಿ ಸಿಗಲಿವೆ ಎಂದರು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸುಭದ್ರ ರಾವ್, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಡಾ. ರವಿರಾಜ್ ಉಡುಪ, ಉಪವ್ಯವಸ್ಥಾಪಕಿ ಜಾನೆಟ್, ಸಹಾಯಕ ವ್ಯವಸ್ಥಾಪಕ ಸಚಿನ್, ಸಿಬ್ಬಂದಿ ಅಭಿಷೇಕ್ ಮತ್ತು ರಮೇಶ್ ಬೂದಿಗಟ್ಟಿ ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

2 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

5 hours ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

6 hours ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಹೊಸರುಚಿ | ಗುಜ್ಜೆ ಸುಕ್ಕಾ

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್…

8 hours ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

1 day ago