ಸಾಂಪ್ರದಾಯಿಕ ಹರಳು ರೂಪದ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಸಿಯುವ ಜೊತೆಗೆ ಅಂತರ್ಜಲ ಕಲುಷಿತಗೊಳ್ಳುವ ಅಪಾಯವಿದೆ. ಇದಕ್ಕೆ ಪರ್ಯಾಯವಾಗಿ ದ್ರವರೂಪದ ನ್ಯಾನೊ ರಸಗೊಬ್ಬರಗಳ ಬಳಕೆ ಮಣ್ಣು ಮತ್ತು ಪೋಷಕಾಂಶಗಳ ನಿರ್ವಹಣೆಯ ದೃಷ್ಟಿಯಿಂದ ಪರಿಣಾಮಕಾರಿಯಾಗಿದೆ ಎಂದು ದಾವಣಗೆರೆ ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಆನಗೋಡು ಹೋಬಳಿಯ ಹಾಲವರ್ತಿ ಗ್ರಾಮದಲ್ಲಿ ತೊಗರಿ ಜಮೀನಿನಲ್ಲಿ ಕೃಷಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಡ್ರೋನ್ ಮೂಲಕ ನ್ಯಾನೊ ರಸಗೊಬ್ಬರ ಸಿಂಪರಣಾ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಂಪ್ರದಾಯಿಕ ಡಿಎಪಿ ಮತ್ತು ಯೂರಿಯಾ ರಸಗೊಬ್ಬರಗಳನ್ನು ನೇರವಾಗಿ ಮಣ್ಣಿಗೆ ನೀಡಿದಾಗ, ಅವುಗಳಲ್ಲಿನ ಕೆಲವು ಪೋಷಕಾಂಶಗಳು ನೀರಿನಲ್ಲಿ ಕರಗಿ ಅಂತರ್ಜಲ ಸೇರುವ ಸಾಧ್ಯತೆಯಿದೆ. ಇದರಿಂದ ಮಣ್ಣಿನ ಗುಣಮಟ್ಟದ ಮೇಲೆ ಪರಿಣಾಮ ಬೀರುವುದಲ್ಲದೆ, ಮನುಷ್ಯರು ಮತ್ತು ಜಾನುವಾರುಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಅವರು ತಿಳಿಸಿದರು.
ಈ ಹಿನ್ನೆಲೆಯಲ್ಲಿ ದ್ರವರೂಪದ ನ್ಯಾನೊ ರಸಗೊಬ್ಬರಗಳ ಬಳಕೆ ಹಾಗೂ ಡ್ರೋನ್ ಮೂಲಕ ಸಿಂಪರಣೆಯಂತಹ ಆಧುನಿಕ ಕೃಷಿ ತಂತ್ರಜ್ಞಾನಗಳನ್ನು ರೈತರು ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಕೃಷಿಯಲ್ಲಿ ಪೋಷಕಾಂಶಗಳ ಸಮರ್ಪಕ ನಿರ್ವಹಣೆ, ಮಣ್ಣಿನ ಆರೋಗ್ಯ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡುವ ಅಗತ್ಯವಿದೆ ಎಂಬ ಸಂದೇಶವನ್ನು ಈ ಪ್ರಾತ್ಯಕ್ಷಿಕೆ ನೀಡಿದೆ.
ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ…
2008–09ರಲ್ಲಿ ಅಡಿಕೆಯ ಪರ್ಯಾಯ ಬಳಕೆಗಳ ಸಂಶೋಧನೆಗಾಗಿ ಮಂಗಳೂರಿನ ARDF ಸಂಸ್ಥೆಗೆ ₹1 ಕೋಟಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 8ರವರೆಗೆ…
ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಪ್ರಭಾವ ಬೀರಿದ್ದ ಮುರಸು ಚಂಡಮಾರುತ ಉತ್ತರ ವಾಯವ್ಯ…
₹35 ಕೋಟಿ ಮೌಲ್ಯದ ಅಡಿಕೆ ಅಕ್ರಮ ಆಮದು ಮತ್ತು ಕಸ್ಟಮ್ಸ್ ಸುಂಕ ವಂಚನೆ…
ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳ ಜೊತೆ ಜೋಡಿಸುವ ಗುರಿಯನ್ನು…