ಜೇನು ಸಿಹಿ ಮಾತ್ರವಲ್ಲ- ಆರೋಗ್ಯ, ಸ್ವ-ಉದ್ಯೋಗ ಮತ್ತು ಸ್ವಾವಲಂಬನೆಯ ಉದಾಹರಣೆ

May 26, 2025
3:59 PM
ಈಗ ಕೆಲವು ಶಾಲೆಗಳಲ್ಲಿ ಶುಗರ್ ಬೋರ್ಡ್ ಹಾಕಲಾಗುತ್ತಿದೆ. ಇದರ ಉದ್ದೇಶ ಮಕ್ಕಳಿಗೆ ಸಕ್ಕರೆ ಸೇವನೆ ಬಗ್ಗೆ ಜಾಗೃತಿ ಮೂಡಿಸುವುದು. ಬಾಲ್ಯದಿಂದಲೇ ಮಕ್ಕಳು ಆರೋಗ್ಯಕರ ಜೀವನಶೈಲಿಯ ಅಭ್ಯಾಸ ಮಾಡಿಕೊಳ್ಳುವಂತೆ ಪ್ರಧಾನಿ ಕರೆ ನೀಡಿದ್ದಾರೆ.

ಈಚೆಗೆ’ವಿಶ್ವ ಜೇನುನೊಣ ದಿನ’ ಎಂದು ಆಚರಿಸಲಾಯಿತು, ಈ ದಿನ ಜೇನುತುಪ್ಪವು ಕೇವಲ ಸಿಹಿ ಮಾತ್ರವಲ್ಲ, ಆರೋಗ್ಯ, ಸ್ವ-ಉದ್ಯೋಗ ಮತ್ತು ಸ್ವಾವಲಂಬನೆಯ ಉದಾಹರಣೆಯಾಗಿದೆ. ರೈತರು, ಮಹಿಳಾ ಉದ್ಯಮಿಗಳಿಂದ ಜೇನುತುಪ್ಪವನ್ನು ಖರೀದಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಆಕಾಶವಾಣಿಯ ಜನಪ್ರಿಯ ಕಾರ್ಯಕ್ರಮ ’ಮನ್ ಕಿ ಬಾತ್’ನಲ್ಲಿ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

ಸ್ವಚ್ಛ ಭಾರತ ಅಭಿಯಾನ ಈಗ ಕೇವಲ ನಗರಗಳ ಮಟ್ಟಕ್ಕೆ ಸೀಮಿತವಿಲ್ಲ, ಇದು ಪರ್ವತ ಶಿಖರಗಳವರೆಗೆ ವಿಸ್ತರಿಸಿದೆ. ಕಾಗದದ ತ್ಯಾಜ್ಯ ನಿರ್ವಹಣೆ ಬಗ್ಗೆಯೂ ಮಾತನಾಡಿದ ಪ್ರಧಾನಿ, ಇದು ಇಂದಿನ ಮುಖ್ಯ ಸಮಸ್ಯೆಯಾಗಿದೆ ಎಂದು ಹೇಳಿದರು. ದೇಶದ ತ್ಯಾಜ್ಯ ವಿಲೇವಾರಿ ಸ್ಥಳಗಳಲ್ಲಿ ಬಹುಪಾಲು ಕಾಗದದ ತ್ಯಾಜ್ಯವಿದೆ. ಒಂದು ಟನ್ ಕಾಗದವನ್ನು ಮರುಬಳಕೆ ಮಾಡುವುದರಿಂದ 17 ಮರಗಳು ಮತ್ತು ಸಾವಿರಾರು ಲೀಟರ್ ನೀರನ್ನು ಉಳಿಸಬಹುದು ಎಂದು ತಿಳಿಸಿದ್ದಾರೆ.

’ಆಪರೇಷನ್ ಸಿಂಧೂರ್’ ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. ’ಆಪರೇಷನ್ ಸಿಂಧೂರ್’ ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ಮತ್ತು ಉತ್ಸಾಹ ತುಂಬಿದೆ ಎಂದು ತಿಳಿಸಿದ್ದಾರೆ. ’ಆಪರೇಷನ್ ಸಿಂಧೂರ್’ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಇದು ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರಣವಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ನಮ್ಮ  ಯೋಧರು ಪಾಕ್ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದ್ದು  ಅವರ ಅದಮ್ಯ ಸಾಹಸವಾಗಿತ್ತು. ಅದರಲ್ಲಿ ಭಾರತದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳು, ಉಪಕರಣಗಳು ಮತ್ತು ತಂತ್ರಜ್ಞಾನದ ಶಕ್ತಿಯೂ ಸೇರಿತ್ತು. ಈ ಅಭಿಯಾನದ ನಂತರ, ದೇಶಾದ್ಯಂತ ‘ವೋಕಲ್ ಫಾರ್ ಲೋಕಲ್ ಕುರಿತು ಹೊಸ ಆಶಾಕಿರಣ ಮೂಡಿಸಿದೆ ಎಂದು ಹೇಳಿದ್ದಾರೆ.

ಈಗ ಕೆಲವು ಶಾಲೆಗಳಲ್ಲಿ ಶುಗರ್ ಬೋರ್ಡ್ ಹಾಕಲಾಗುತ್ತಿದೆ. ಇದರ ಉದ್ದೇಶ ಮಕ್ಕಳಿಗೆ ಸಕ್ಕರೆ ಸೇವನೆ ಬಗ್ಗೆ ಜಾಗೃತಿ ಮೂಡಿಸುವುದು. ಬಾಲ್ಯದಿಂದಲೇ ಮಕ್ಕಳು ಆರೋಗ್ಯಕರ ಜೀವನಶೈಲಿಯ ಅಭ್ಯಾಸ ಮಾಡಿಕೊಳ್ಳುವಂತೆ ಪ್ರಧಾನಿ ಕರೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಯೋಗದಿನ’ಕ್ಕೆ ಕೆಲವೇ ದಿನ ಬಾಕಿಯಿದ್ದು ಯೋಗಾಭ್ಯಾಸದಿಂದ  ದೂರವಿದ್ದರೆ ಕೂಡಲೇ ಯೋಗಾಭ್ಯಾಸ ಆರಂಭಿಸಿ ಎಂದು ಕರೆ ನೀಡಿದ್ದಾರೆ ಎಂದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎರಡು ಎಕ್ರೆಯಲ್ಲಿ ಸಮಗ್ರ ಕೃಷಿ – ಕೃಷಿಯಲ್ಲಿ ಯಶಸ್ಸು ಕಂಡ ರೈತ
November 19, 2025
6:51 AM
by: ರೂರಲ್‌ ಮಿರರ್ ಸುದ್ದಿಜಾಲ
ಕುಕ್ಕೆ ಸುಬ್ರಹ್ಮಣ್ಯ | ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್
November 18, 2025
1:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-11-2025 | ಇನ್ನೊಂದು ಮಳೆಯಾಗುವುದು ಪಕ್ಕಾ….!, ಯಾವಾಗ..? ಕಾರಣ ಏನು..?
November 18, 2025
12:29 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ಅಡಿಕೆ ಬೆಳೆ ವಿಸ್ತರಣೆಯ ಜೊತೆಗೇ ಉಪಬೆಳೆಗೆ ಆದ್ಯತೆ..!
November 17, 2025
10:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror