ಈಚೆಗೆ’ವಿಶ್ವ ಜೇನುನೊಣ ದಿನ’ ಎಂದು ಆಚರಿಸಲಾಯಿತು, ಈ ದಿನ ಜೇನುತುಪ್ಪವು ಕೇವಲ ಸಿಹಿ ಮಾತ್ರವಲ್ಲ, ಆರೋಗ್ಯ, ಸ್ವ-ಉದ್ಯೋಗ ಮತ್ತು ಸ್ವಾವಲಂಬನೆಯ ಉದಾಹರಣೆಯಾಗಿದೆ. ರೈತರು, ಮಹಿಳಾ ಉದ್ಯಮಿಗಳಿಂದ ಜೇನುತುಪ್ಪವನ್ನು ಖರೀದಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಆಕಾಶವಾಣಿಯ ಜನಪ್ರಿಯ ಕಾರ್ಯಕ್ರಮ ’ಮನ್ ಕಿ ಬಾತ್’ನಲ್ಲಿ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.
ಸ್ವಚ್ಛ ಭಾರತ ಅಭಿಯಾನ ಈಗ ಕೇವಲ ನಗರಗಳ ಮಟ್ಟಕ್ಕೆ ಸೀಮಿತವಿಲ್ಲ, ಇದು ಪರ್ವತ ಶಿಖರಗಳವರೆಗೆ ವಿಸ್ತರಿಸಿದೆ. ಕಾಗದದ ತ್ಯಾಜ್ಯ ನಿರ್ವಹಣೆ ಬಗ್ಗೆಯೂ ಮಾತನಾಡಿದ ಪ್ರಧಾನಿ, ಇದು ಇಂದಿನ ಮುಖ್ಯ ಸಮಸ್ಯೆಯಾಗಿದೆ ಎಂದು ಹೇಳಿದರು. ದೇಶದ ತ್ಯಾಜ್ಯ ವಿಲೇವಾರಿ ಸ್ಥಳಗಳಲ್ಲಿ ಬಹುಪಾಲು ಕಾಗದದ ತ್ಯಾಜ್ಯವಿದೆ. ಒಂದು ಟನ್ ಕಾಗದವನ್ನು ಮರುಬಳಕೆ ಮಾಡುವುದರಿಂದ 17 ಮರಗಳು ಮತ್ತು ಸಾವಿರಾರು ಲೀಟರ್ ನೀರನ್ನು ಉಳಿಸಬಹುದು ಎಂದು ತಿಳಿಸಿದ್ದಾರೆ.
’ಆಪರೇಷನ್ ಸಿಂಧೂರ್’ ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. ’ಆಪರೇಷನ್ ಸಿಂಧೂರ್’ ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ಮತ್ತು ಉತ್ಸಾಹ ತುಂಬಿದೆ ಎಂದು ತಿಳಿಸಿದ್ದಾರೆ. ’ಆಪರೇಷನ್ ಸಿಂಧೂರ್’ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಇದು ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರಣವಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ನಮ್ಮ ಯೋಧರು ಪಾಕ್ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದ್ದು ಅವರ ಅದಮ್ಯ ಸಾಹಸವಾಗಿತ್ತು. ಅದರಲ್ಲಿ ಭಾರತದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳು, ಉಪಕರಣಗಳು ಮತ್ತು ತಂತ್ರಜ್ಞಾನದ ಶಕ್ತಿಯೂ ಸೇರಿತ್ತು. ಈ ಅಭಿಯಾನದ ನಂತರ, ದೇಶಾದ್ಯಂತ ‘ವೋಕಲ್ ಫಾರ್ ಲೋಕಲ್ ಕುರಿತು ಹೊಸ ಆಶಾಕಿರಣ ಮೂಡಿಸಿದೆ ಎಂದು ಹೇಳಿದ್ದಾರೆ.
ಈಗ ಕೆಲವು ಶಾಲೆಗಳಲ್ಲಿ ಶುಗರ್ ಬೋರ್ಡ್ ಹಾಕಲಾಗುತ್ತಿದೆ. ಇದರ ಉದ್ದೇಶ ಮಕ್ಕಳಿಗೆ ಸಕ್ಕರೆ ಸೇವನೆ ಬಗ್ಗೆ ಜಾಗೃತಿ ಮೂಡಿಸುವುದು. ಬಾಲ್ಯದಿಂದಲೇ ಮಕ್ಕಳು ಆರೋಗ್ಯಕರ ಜೀವನಶೈಲಿಯ ಅಭ್ಯಾಸ ಮಾಡಿಕೊಳ್ಳುವಂತೆ ಪ್ರಧಾನಿ ಕರೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಯೋಗದಿನ’ಕ್ಕೆ ಕೆಲವೇ ದಿನ ಬಾಕಿಯಿದ್ದು ಯೋಗಾಭ್ಯಾಸದಿಂದ ದೂರವಿದ್ದರೆ ಕೂಡಲೇ ಯೋಗಾಭ್ಯಾಸ ಆರಂಭಿಸಿ ಎಂದು ಕರೆ ನೀಡಿದ್ದಾರೆ ಎಂದರು.
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490