ರೈತರ ನಿರಂತರ ಪ್ರತಿಭಟನೆ ರಾಷ್ಟ್ರವ್ಯಾಪಿ ನಡೆದ ನಂತರ ಕಳೆದ ತಿಂಗಳು ರದ್ದುಪಡಿಸಿದ ಮೂರು ಕೃಷಿ ಕಾನೂನುಗಳನ್ನು ಸರ್ಕಾರವು ಮತ್ತೆ ಜಾರಿಗೆ ತರಬಹುದು ಅಥವಾ ಮರು ಪರಿಚಯಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ತಂದಿದ್ದೇವೆ. ಆದರೆ ಕೆಲವರು ಈ ಕಾನೂನುಗಳನ್ನು ಇಷ್ಟಪಡಲಿಲ್ಲ. 7೦ ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೃಷಿ ಕ್ಷೇತ್ರವೂ ದೊಡ್ಡ ಸುಧಾರಣೆಯಾಗಿದೆ. ರೈತರು ಭಾರತದ ಬೆನ್ನಲುಬು, ಬೆನ್ನೆಲುಬು ಗಟ್ಟಿಯಾಗಿದ್ದರೆ ದೇಶವೂ ಸದೃಢವಾಗುತ್ತದೆ ಎಂದರು.
ಇದಕ್ಕೆ ಪ್ರತಿಯಾಗಿ ಉತ್ತರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೃಷಿ ಸಚಿವರು ಸಾರ್ವಜನಿಕವಾಗಿ ವ್ಯತಿರಿಕ್ತವಾಗಿ ಮತ್ತೆ ರೈತರನ್ನು, ರೈತ ಹೋರಾಟವನ್ನು ಅವಮಾನಿಸಿದ್ದಾರೆ. ಸರಕಾರ ಮತ್ತೊಮ್ಮೆ ರೈತ ವಿರೋಧಿ ಕ್ರಮಕ್ಕೆ ಮುಂದಾದರೆ ಅನ್ನದಾತರು ಮತ್ತೆ ಸತ್ಯಾಗ್ರಹಕ್ಕೆ ಮುಂದಾಗುತ್ತಾರೆ . ಮಾತ್ರವಲ್ಲ ಸರಕಾರದ ಅಹಂಕಾರವನ್ನು ಒಮ್ಮೆ ಹತ್ತಿಕ್ಕಿ ಸತ್ಯಾಗ್ರಹ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…