Advertisement
MIRROR FOCUS

27 ವರ್ಷಗಳ ನಾಸಾ ಸೇವೆ ಪೂರ್ಣ: ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತಿ

Share

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಸುಮಾರು 27 ವರ್ಷಗಳ ಗಮನಾರ್ಹ ಸೇವೆ ಸಲ್ಲಿಸಿರುವ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶ ಸಂಸ್ಥೆಯಿಂದ ನಿವೃತ್ತರಾಗಿದ್ದಾರೆ. ಕಳೆದ ತಿಂಗಳು 27ರಂದು ಜಾರಿಗೆ ಬರುವಂತೆ ಸುನೀತಾ ವಿಲಿಯಮ್ಸ್ ಅವರು ನಿವೃತ್ತರಾಗಿದ್ದಾರೆ ಎಂದು ನಾಸಾ ಅಧಿಕೃತವಾಗಿ ಘೋಷಣೆ ಮಾಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ನಾಸಾ, ಸುನೀತಾ ವಿಲಿಯಮ್ಸ್ ಅವರು ತಮ್ಮ ವೃತ್ತಿ ಜೀವನದಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಮೂರು ಮಹತ್ವದ ಕಾರ್ಯಾಚರಣೆಗಳಲ್ಲಿ ಭಾಗವಹಿಸಿ ಯಶಸ್ವಿಯಾಗಿ ಹಾರಾಟ ನಡೆಸಿದ್ದಾರೆ ಎಂದು ತಿಳಿಸಿದೆ. ಒಟ್ಟು 608 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದಿರುವ ಅವರು, ನಾಸಾ ಗಗನಯಾತ್ರಿಗಳ ಪೈಕಿ ಎರಡನೇ ಅತಿ ಹೆಚ್ಚು ದಿನ ಬಾಹ್ಯಾಕಾಶದಲ್ಲಿದ್ದ ಸಾಧನೆಗೆ ಪಾತ್ರರಾಗಿದ್ದಾರೆ.

ಇದಲ್ಲದೇ, ಸುನೀತಾ ವಿಲಿಯಮ್ಸ್ ಅವರು 9 ಬಾರಿ ಬಾಹ್ಯಾಕಾಶ ನಡಿಗೆಗಳನ್ನು (Spacewalks) ಪೂರ್ಣಗೊಳಿಸಿದ್ದು, ಒಟ್ಟು 62 ಗಂಟೆಗಳಿಗಿಂತ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇದು ಒಬ್ಬ ಮಹಿಳಾ ಗಗನಯಾತ್ರಿ ಸಾಧಿಸಿರುವ ಅತಿ ಹೆಚ್ಚಿನ ಬಾಹ್ಯಾಕಾಶ ನಡಿಗೆ ಸಮಯವೆಂದು ನಾಸಾ ತಿಳಿಸಿದೆ.

ವಿಶೇಷವೆಂದರೆ, ಬಾಹ್ಯಾಕಾಶದಲ್ಲೇ ಮ್ಯಾರಥಾನ್ ಓಡಿದ ಮೊದಲ ವ್ಯಕ್ತಿ ಎಂಬ ಗೌರವವೂ ಸುನೀತಾ ವಿಲಿಯಮ್ಸ್ ಅವರಿಗೆ ಸಲ್ಲುತ್ತದೆ. ಅವರ ಈ ಸಾಧನೆಗಳು ಬಾಹ್ಯಾಕಾಶ ಸಂಶೋಧನೆಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲುಗಳಾಗಿ ಗುರುತಿಸಿಕೊಂಡಿವೆ.

ಭಾರತೀಯ ಮೂಲದ 60 ವರ್ಷದ ಸುನೀತಾ ವಿಲಿಯಮ್ಸ್ ಅವರು ತಮ್ಮ ವೃತ್ತಿ ಜೀವನದಾದ್ಯಂತ ಗಗನಯಾತ್ರಿಯಾಗಿ ಅನೇಕ ಸವಾಲುಗಳನ್ನು ಎದುರಿಸಿ, ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

1 hour ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

2 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

2 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

12 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

13 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

17 hours ago