ಪುತ್ತೂರು | ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿಗೆ ಬೆಳ್ಳಿಯ ಪದಕ

November 2, 2022
10:07 AM

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ.

ಛತ್ತೀಸ್‍ಗಢದ ಬಿಲಾಸ್‍ಪುರ್ ನಲ್ಲಿ ನಡೆದ 23ರ ಹರೆಯದೊಳಗಿನ 2ನೇ ರಾಷ್ಟ್ರೀಯ ಅತ್ಲೆಟಿಕ್ ಕ್ರೀಡಾಕೂಟದಲ್ಲಿ ಟ್ರಿಪಲ್‍ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 12.79 ಮೀಟರ್ ದೂರ ಜಿಗಿಯುವ ಮೂಲಕ ತನ್ನ ವೈಯಕ್ತಿಕ ದಾಖಲೆಯನ್ನೂ ಉತ್ತಮ ಪಡಿಸಿಕೊಂಡಿದ್ದಾರೆ. ಇವರು ಇತ್ತೀಚಿಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಇವರಿಗೆ ಮಾರ್ಗದರ್ಶನ ನೀಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror