ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

June 17, 2025
9:55 PM

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತಕ್ಕೆ 2025 ನೇ ಸಾಲಿನ ಪ್ರತಿಷ್ಠಿತ ಐಐಎನ್ ಪ್ಲಾಟಿನಮ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮೂಲಸೌಕರ್ಯ ಕ್ಷೇತ್ರದಲ್ಲಿ ಕೌಶಲ್ಯ ಅಭಿವೃದ್ಧಿ, ತಂತ್ರಜ್ಞಾನ ಆವಿಷ್ಕಾರಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ರೂಪಿತವಾಗಿರುವ ಇನ್ಫ್ರಾಸ್ಟ್ರಕ್ಚರ್ ಸ್ಕಿಲ್ ಡೆವಲಪ್ಮೆಂಟ್ ಅಕಾಡೆಮಿ ಸಂಸ್ಥೆಯು ವಿಜೆಎನ್‌ಎಲ್ ಗೆ ನವದೆಹಲಿಯಲ್ಲಿ ಈ ಪ್ರಶಸ್ತಿ ನೀಡಿದೆ.

Advertisement

ವಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣಚಿತ್ತಯ್ಯ ಹಾಗೂ  ಅಧಿಕಾರಿಗಳ ತಂಡ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶಸ್ತಿ ಫಲಕದೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಯೋಜನೆಯಲ್ಲಿ ಅವಳಿ ತೊಟ್ಟಿಗಳು, ಸರ್ವೀಸ್ ರಸ್ತೆಗಳ ಸಮನ್ವಯತೆಯಿಂದ ಕಾರ್ಯಾಚರಣೆ ದಕ್ಷತೆಗಾಗಿ ಹೊಸ ವಿನ್ಯಾಸವನ್ನು ರೂಪಿಸಲಾಗಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror