ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ. ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು 2014 ರಿಂದ ರಾಷ್ಟ್ರೀಯ ಕ್ಯಾನ್ಸರ್ ದಿನವನ್ನಾಗಿ ಆಚರಿಸಲಾಯಿತು. ಈ ದಿನವು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ರೇಡಿಯಂ ಮತ್ತು ಪೊಲೋನಿಯಂನ ಸಂಶೋಧನೆಗಳನ್ನು ಮಾಡಿದ ಭೌತಶಾಸ್ತ್ರಜ್ಞೆ ಮತ್ತು ರಸಾಯನಶಾಸ್ತ್ರಜ್ಞೆ ಮೇರಿ ಕ್ಯೂರಿಯ ಜನ್ಮದಿನವಾಗಿದೆ.…..ಮುಂದೆ ಓದಿ….
2014 ರಿಂದ, ಭಾರತವು ವಾರ್ಷಿಕವಾಗಿ ನವೆಂಬರ್ 7 ಅನ್ನು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವೆಂದು ಗುರುತಿಸಿದೆ. ಕ್ಯಾನ್ಸರ್ ತಡೆಗಟ್ಟುವಿಕೆ, ಪತ್ತೆ ಮತ್ತು ಚಿಕಿತ್ಸೆಯ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸುವುದು ಈ ದಿನದ ಕೇಂದ್ರಬಿಂದುವಾಗಿದೆ. ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ಪ್ರವೇಶಿಸಬಹುದಾದ ಚಿಕಿತ್ಸೆಯ ಆಯ್ಕೆಗಳ ಬಗ್ಗೆ ಜ್ಞಾನವನ್ನು ಉತ್ತೇಜಿಸುವುದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದ ಗುರಿಯಾಗಿದೆ. ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಕ್ಯಾನ್ಸರ್ ತಡೆಗಟ್ಟುವ ಕ್ರಮಗಳ ಬಗ್ಗೆ ಹಾಗೂ ಅಪಾಯಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಕೆಲವು ಸೂಚನೆಗಳನ್ನು ಜನರಿಗೆ ನೀಡುತ್ತಿದೆ.
ಭಾರತದಲ್ಲಿ ಕ್ಯಾನ್ಸರ್ ಪ್ರಮಾಣ 2022 ರಲ್ಲಿ, 14.1 ಲಕ್ಷಕ್ಕೂ ಹೆಚ್ಚು ಹೊಸ ಕ್ಯಾನ್ಸರ್ ಪ್ರಕರಣಗಳನ್ನು ಹೊಂದಿತ್ತು ಮತ್ತು ಈ ಕಾಯಿಲೆಯಿಂದ 9.1 ಲಕ್ಷಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿ ಹೇಳಿದೆ. ಅಧ್ಯಯನ ವರದಿಗಳ ಪ್ರಕಾರ, ಶ್ವಾಸಕೋಶ, ತುಟಿ ಮತ್ತು ಬಾಯಿ ಕ್ಯಾನ್ಸರ್‌ಗಳು ಪುರುಷರಲ್ಲಿ ಹೆಚ್ಚು ಪ್ರಚಲಿತವಾಗಿದೆ. ಮಹಿಳೆಯರಲ್ಲಿ ಅತ್ಯಂತ ಸಾಮಾನ್ಯವಾಗಿ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಹೆಚ್ಚಾಗಿತ್ತು.
ವಿಶ್ವಾದ್ಯಂತ 97 ಲಕ್ಷ ಕ್ಯಾನ್ಸರ್ ಸಂಬಂಧಿತ ಸಾವುಗಳು ಮತ್ತು ಎರಡು ಕೋಟಿ ಹೊಸ ಪ್ರಕರಣಗಳು ದಾಖಲಾಗಿದೆ ಎಂದು ಆರೋಗ್ಯ ಸಂಸ್ಥೆಯು ಅಂದಾಜಿಸಿದೆ. ಕ್ಯಾನ್ಸರ್ ರೋಗ ಕಂಡುಬಂದ ಬಳಿಕ ಐದು ವರ್ಷಗಳಲ್ಲಿ ಸುಮಾರು 5.3 ಕೋಟಿ ಜನರು ಇನ್ನೂ ಜೀವಂತವಾಗಿದ್ದಾರೆ. ಅದಕ್ಕೆ ಕಾರಣ ಸೂಕ್ತ ಮುನ್ನೆಚ್ಚರಿಕೆಗಳು. ಕ್ಯಾನ್ಸರ್ ರೋಗ ಬಂದ ಕೂಡಲೇ ರೋಗಿಗಳ ಭಯಗೊಳ್ಳಬೇಕಾಗಿಲ್ಲ. ಮುಂದಿನ ಜೀವನದಲ್ಲಿ ಎಚ್ಚರಿಕೆ ಹಾಗೂ ಸೂಕ್ತ ಚಿಕಿತ್ಸೆಗಳೇ ಪರಿಹಾರವಾಗಿದೆ.
ವೈದ್ಯಕೀಯ ಅಧ್ಯಯನಗಳ ಪ್ರಕಾರ ಆರೋಗ್ಯಕರ ದೇಹದ ತೂಕವನ್ನು ಕಾಪಾಡಿಕೊಳ್ಳುವುದು, ಹಣ್ಣುಗಳು ಮತ್ತು ತರಕಾರಿಗಳನ್ನು ಹೊಂದಿರುವ ಪೌಷ್ಟಿಕ ಆಹಾರವನ್ನು ಸೇವಿಸುವುದು, ದೈನಂದಿನ ದೈಹಿಕ ಚಟುವಟಿಕೆ ಮತ್ತು ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳುವುದು, ಮದ್ಯಪಾನವನ್ನು ಮಾಡದಿರುವುದು, ಪಿತ್ತಕೋಶದ ಚಟುವಟಿಕೆ ಸರಿಯಾಗಿರುವಂತೆ ನೋಡಿಕೊಳ್ಳುವುದು, ವಿಕಿರಣದಿಂದ ದೂರವಿಡುವುದು ( ದೀರ್ಘಾವಧಿಯ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸುವುದು), ಒಳಾಂಗಣ ಮತ್ತು ಹೊರಾಂಗಣದಲ್ಲಿ ವಾಯು ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದನ್ನು ಕಡಿಮೆಗೊಳಿಸುವುದು ಇಂತಹ ಮುನ್ನೆಚ್ಚರಿಕಾ ಕ್ರಮಗಳನ್ನು ರೋಗಿಗಳು ಅಳವಡಿಸಿಕೊಳ್ಳುವುದರ ಜೊತೆಗೆ ಮಾನಸಿಕ ಧೈರ್ಯವನ್ನು ಹೆಚ್ಚಿಸಿಕೊಳ್ಳುವುದು ಅತೀ ಅಗತ್ಯವಾಗಿದೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…