Advertisement
MIRROR FOCUS

ರಾಷ್ಟ್ರೀಯ ಕೈಮಗ್ಗ ದಿನ | ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲ

Share

ಪ್ರತಿ ವರ್ಷ ಭಾರತದಲ್ಲಿ(India) ಆಗಸ್ಟ್‌ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನ ಆಚರಣೆ ಮಾಡಲಾಗುತ್ತದೆ. 1905ರ ಸ್ವದೇಶಿ ಚಳವಳಿಯ ಸವಿನೆನಪಿಗಾಗಿ 2015 ರಲ್ಲಿ ಮೊದಲ ಬಾರಿಗೆ ಆಗಸ್ಟ್ 7 ರಂದು ‘ರಾಷ್ಟ್ರೀಯ ಕೈಮಗ್ಗ ದಿನ’ವನ್ನಾಗಿ ಕೇಂದ್ರ ಸರ್ಕಾರ(Central Govt) ಆಚರಿಸಿತು. ಕೈಮಗ್ಗ ಕ್ಷೇತ್ರದಲ್ಲಿ ಹೊಸ ಉತ್ಪನ್ನಗಳನ್ನು ಆವಿಷ್ಕರಿಸಿದವರಿಗೆ 2015 ರಿಂದ ಸಂತ ಕಬೀರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

1905 ಆಗಸ್ಟ್ 7 ರಂದು ಬಂಗಾಳದಲ್ಲಿ ಸ್ವದೇಶಿ ಚಲುವಳಿ ಪ್ರಾರಂಭವಾಗಿತ್ತು. ಆ ಚಳುವಳಿಯ ಮೂಲ ಉದ್ದೇಶ ವಿದೇಶಿ ನಿರ್ಮಿತ ಉತ್ಪನ್ನಗಳನ್ನು ಬಹಿಷ್ಕರಿಸಿ, ಭಾರತೀಯ ನಿರ್ಮಿತ ಉತ್ಪನ್ನಗಳನ್ನು ಉತ್ತೇಜಿಸುವುದಾಗಿದೆ. ಹಾಗಾಗಿ ಪ್ರತಿ ವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. 2015 ರಲ್ಲಿ ಪ್ರಧಾನಿ ಮೋದಿ ಅವರು ದೇಶದಲ್ಲಿ ಇರುವ ನೇಕಾರರ ಕೆಲಸ ಮತ್ತು ಅವರ ಶ್ರಮವನ್ನು ಶ್ಲಾಘಿಸುವ ಮೂಲಕ ಮೊದಲ ಬಾರಿಗೆ ರಾಷ್ಟ್ರೀಯ ಕೈಮಗ್ಗ ದಿನವನ್ನು ಉದ್ಘಾಟನೆ ಮಾಡಿದ್ದರು.

ರಾಷ್ಟ್ರೀಯ ಕೈಮಗ್ಗ ದಿನದ ಮಹತ್ವ: ಭಾರತ ದೇಶದ ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯ ಪ್ರತಿಕವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಣೆ ಮಾಡಲಾಗುತ್ತದೆ. ಕೈಮಗ್ಗವು ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲವಾಗಿದೆ. ಇದು ದೇಶದ ಕೈಮಗ್ಗ ನೇಕಾರರನ್ನು ಗೌರವಿಸುವ ದಿನವೂ ಹೌದು. ದೇಶದ ನೇಕಾರರ ಅಭಿವೃದ್ಧಿಗಾಗಿ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

2 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

2 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

2 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

2 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

19 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago